ಸಂಸತ್ತಿನ ವಿಶೇಷ ಅಧಿವೇಶನ ಈ ಬಾರಿಯಿಂದ ನೂತನ ಕಟ್ಟಡದಲ್ಲಿಯೇ ಆರಂಭವಾಗಲಿದ್ದು, ಅದಕ್ಕೂ ಒಂದು ದಿನ ಮೊದಲು ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ನೂತನ ಸಂಸತ್ ಭವನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಸೋಮವಾರದಿಂದ ಆಕಲಾಪ ಆರಂಭವಾಗಲಿದೆ. ಧ್ವಜಾರೋಹಣ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಇದ್ದರು. ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಉಪರಾಷ್ಟ್ರಪತಿ, ಯುಗಾಂತರದ ಬದಲಾವಣೆಗೆ ನಮ್ಮ ದೇಶ ಸಾಕ್ಷಿಯಾಗುತ್ತಿದೆ. ವಿಶ್ವವೇ ಭಾರತದ ಶಕ್ತಿ ಮತ್ತು ಕೊಡುಗೆಯನ್ನು ಗುರುತಿಸುತ್ತಿದೆ. ನಾವು ಅದ್ಭುತ ಅಭಿವೃದ್ಧಿ, ಸಾಧನೆಗಳನ್ನು ನೋಡುತ್ತಿರುವ ಕಾಲದಲ್ಲಿ ಬದುಕುತ್ತಿದ್ದೇವೆ ಎಂದು ಹೇಳಿದರು.
ಕಾಂಗ್ರೆಸ್ ಅಧ್ಯಕ್ಷ ಮತ್ತು ರಾಜ್ಯಸಭೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಶನಿವಾರ ಹೇಳಿದ್ದರು. ಹೀಗಾಗಿ ಭಾಗವಹಿಸಿರಲಿಲ್ಲ.