ಮಂಡ್ಯದಲ್ಲಿ ಸಂಭ್ರಮದಿಂದ ನಡೆಯುತ್ತಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ 2ನೇ ದಿನ ಇಂದು. ಹೀಗಾಗಿ ಮಂಡ್ಯ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಿಗೆ ಇಂದು ಸಹ ರಜೆ ಘೋಷಣೆ ಮಾಡಲಾಗಿದೆ. ಮುಂದಿನ ಸರ್ಕಾರಿ ರಜಾ ದಿನಗಳಂದು ತರಗತಿಯನ್ನು ನಡೆಸಿ ಸರಿದೂಗಿಸುವಂತೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಸೂಚನೆ ನೀಡಿದ್ದಾರೆ. ಅಕ್ಷರ ಜಾತ್ರೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಉಪನ್ಯಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ.
ಕೊಬ್ಬರಿ ದರ ಏರಿಕೆ:ಕರ್ನಾಟಕದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ
ಕರ್ನಾಟಕದ ರೈತರಿಗೆ ಕೇಂದ್ರ ಸರ್ಕಾರವು ಸಂತಸದ ಸುದ್ದಿಯನ್ನು ನೀಡಿದೆ. ಕೇಂದ್ರ ಸರ್ಕಾರವು, ಮಿಲ್ಲಿಂಗ್ ಕೊಬ್ಬರಿಯ (ಹೋಳಾದ) ಕನಿಷ್ಠ ಬೆಂಬಲ ಬೆಲೆ (MSP) ಕ್ವಿಂಟಲ್ಗೆ ₹12,100 ಆಗಿ ಹೆಚ್ಚಿಸುವ...