ಕೋಲಾರದಲ್ಲಿ ನಾಳೆ ಶಾಲೆ-ಕಾಲೇಜುಗಳಿಗೆ ರಜೆ
ಕೋಲಾರ : ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ನಾಳೆ ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಮಾಹಿತಿ ನೀಡಿದ್ದು, ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಇರಲಿದೆ.
ಇಂದು ರಾತ್ರಿ 10 ಗಂಟೆಯಿಂದ ಎಲ್ಲವೂ ಬಂದ್ ಆಗಲಿದೆ. ಕೇವಲ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ಹೇಳಿದರು.
ಅಲ್ಲದೇ ದಿನಸಿ, ತರಕಾರಿ ಅಂಗಡಿಗಳಿಗೆ ಬೆಳಿಗ್ಗೆ 10 ಗಂಟವರೆಗೂ ಅವಕಾಶ ನೀಡಲಾಗಿದೆ. ಹೋಟೆಲ್ ಗಳಲ್ಲಿ ಪಾರ್ಸಲ್ ಗೆ ಮಾತ್ರ ಅವಕಾಶ ಇರುತ್ತದೆ.
ಬಾರ್, ವೈನ್ ಶಾಪ್ ಗಳು ಸೋಮವಾರ ಬೆಳಿಗ್ಗೆ 5 ಗಂಟವರೆಗೂ ಕ್ಲೋಸ್ ಆಗಲಿದೆ. ಮೆಡಿಕಲ್ ಸೇವೆಗಳು,ಗೂಡ್ಸ್ ವಾಹನಗಳ ಸಂಚಾರಕ್ಕೆ ನಿರ್ಬಂಧವಿಲ್ಲ. ನಿಯಮ ಉಲ್ಲಂಘನೆ ಮಾಡಿದ್ರೆ ಕೇಸ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.