ಫೆಂಗಲ್ ಚಂಡಮಾರುತದ ಪರಿಣಾಮ ಇಂದಿನಿಂದ 3 ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೊತೆಗೆ, ಮಳೆಯ ಹಿನ್ನೆಲೆಯಲ್ಲಿ ರಾಜ್ಯದ 10 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮೈಸೂರು, ದಕ್ಷಿಣಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ಮಂಡ್ಯ, ಕೊಡಗು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೆಂಗಳೂರಲ್ಲಿ ಯಾವುದೇ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಜಗದೀಶ್ ರವರು ಸ್ಪಷ್ಟಪಡಿಸಿದ್ದಾರೆ.
ಸಮಾವೇಶಕ್ಕೆ ಬಳಕೆ ಮಾಡಿರುವ ಹಣ ಯಾವುದು?
ಬೆಂಗಳೂರು: ಕಾಂಗ್ರೆಸ್ಸಿಗರು ಮಾಡುತ್ತಿರುವ ಸಮಾವೇಶಕ್ಕೆ ಹಣ ಎಲ್ಲಿಂದ ಬಂತು ಎಂಬುವುದನ್ನು ಸ್ಪಷ್ಟಪಡಿಸಬೇಕು ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...