ಮಂಡ್ಯ: ಕರ್ತವ್ಯಕ್ಕೆ ತೆರಳಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ಹೋಮ್ ಗಾರ್ಡ್ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಧ್ಯಪ್ರದೇಶದ ಚುನಾವಣಾ ಕರ್ತವ್ಯಕ್ಕೆ ಜಿಲ್ಲೆಯ ಮಳವಳ್ಳಿ(Malavalli) ತಾಲೂಕಿನ ಬೆಳಕವಾಡಿ ಗ್ರಾಮದ ಸಿದ್ದು(27) ತೆರಳಿದ್ದರು. ಮಧ್ಯಪ್ರದೇಶ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಿಂದ ನಾಲ್ಕು ಸಾವಿರ ಜನರು ತೆರಳಿದ್ದರು. ಮಂಡ್ಯ ಜಿಲ್ಲೆಯಿಂದ 200 ಜನರು ತೆರಳಿದ್ದರು. ಚುನಾವಣೆ ಮುಗಿಸಿಕೊಂಡು ಮರಳಿ ಬರುತ್ತಿದ್ದಾಗ, ಅಲ್ಲಿಯ ರಾಜ್ಯ ಚುನಾವಣಾ ಆಯೋಗದ ಯಡವಟ್ಟಿನಿಂದ ಈ ಅವಘಡ ನಡೆದಿದೆ ಎನ್ನಲಾಗಿದೆ.
ಸಿದ್ದು ಅವರು ರೈಲಿನಲ್ಲಿ ಬೆಂಗಳೂರು ಸಮೀಪ ರೈಲಿನಲ್ಲಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೆ, ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಅವರು ಮಧ್ಯಪ್ರದೇಶದಿಂದ ಹೊರಡುವಾಗಲೇ ಅನಾರೋಗ್ಯಕ್ಕೆ ಬಲಿಯಾಗಿದ್ದರು ಎನ್ನಲಾಗಿದೆ. ಅಲ್ಲಿ ಎರಡು ಬಾರಿ ವಾಂತಿ ಮಾಡಿಕೊಂಡಿದ್ದರು ಎನ್ನಲಾಗಿದೆ. ಕೂಡಲೇ ಅವರಿಗೆ ಚಿಕಿತ್ಸೆ ಕೊಡಿಸಿದ್ದರೆ ಬದುಕಬಹುದಿತ್ತು. ಆದರೆ, ನಿರ್ಲಕ್ಷ್ಯ ಮಾಡಿದ್ದರಿಂದಾಗಿ ಸಾವನ್ನಪ್ಪಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.