ಕಣಿವೆ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಭೇಟಿ Amit Shah saaksha tv
ಶ್ರೀನಗರ : ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ಶನಿವಾರ ಕೇಂದ್ರ ಗೃಹ ಸಚಿವ ಭೇಟಿ ನೀಡಲಿದ್ದಾರೆ.
ಈ ಹಿನ್ನೆಲೆಯಲ್ಲಿ ಅಲ್ಲಿನ ಪೊಲೀಸರು ತೀವ್ರ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.
ಕಾಶ್ಮೀರದ ಕೆಲವು ಪ್ರದೇಶಗಳ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿ ಕೆಲ ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ನಾಳೆ ಅಮಿತ್ ಶಾ ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಶ್ರೀನಗರದಿಂದ ಶಾರ್ಜಾಗೆ ಹಾರಾಟ ನಡೆಸಲಿರುವ ಮೊದಲ ವಿಮಾನಕ್ಕೆ ಚಾಲನೆ ನೀಡಲಿದ್ದಾರೆ.
ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಅಲ್ಲಿನ ಪೆÇಲೀಸರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
ಈ ಮಧ್ಯೆ ಕೆಲ ದ್ವಿಚಕ್ರ ವಾಹನ ಮತ್ತು ಇಂಟರ್ ನೆಟ್ ಸ್ಥಗಿತಗೊಳಿಸಿರುವ ಬಗ್ಗೆ ಕಾಶ್ಮೀರ ವಲಯ ಐಜಿಪಿ ಪ್ರತಿಕ್ರಿಯೆ ನೀಡಿದ್ದು, ಇಂಟರ್ನೆಟ್ ಸ್ಥಗಿತಗೊಳಿಸಿರುವುದು ಮತ್ತು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿರುವುದಕ್ಕೂ ಅಮಿತ್ ಶಾ ಭೇಟಿಗೂ ಯಾವುದೇ ಸಂಬಂಧವಿಲ್ಲ. ಭಯೋತ್ಪಾದನಾ ವಿರೋಧಿ ಕ್ರಮಗಳ ಭಾಗವಾಗಿ ಈ ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.