ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ : ಅರಗ ಜ್ಞಾನೇಂದ್ರ
ಬೆಂಗಳೂರು : ಮೈಸೂರಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದು, ರೇಪ್ ಆಗಿರುವುದು ಮೈಸೂರಿನಲ್ಲಿ. ಆದರೆ ಈ ಕಾಂಗ್ರೆಸ್ಸಿನವರು ನನ್ನ ರೇಪ್ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಬೇಜಾವಾಬ್ದಾರಿ ಹೇಳಿಕೆ ನೀಡಿ ವಿವಾದಕ್ಕೀಡಾಗಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ಕಾಂಗ್ರೆಸ್ಸಿನವರು ಗೃಹ ಸಚಿವರು ಅಂದರೆ ನನ್ನನ್ನ ರೇಪ್ ಮಾಡ್ತಿದ್ದಾರೆ.
ನನ್ನ ರೇಪ್ ಮಾಡುವ ಪ್ರಯತ್ನ ಮಾಡ್ತಿದ್ದಾರೆ. ಇಂತಹ ವಿಚಾರದಲ್ಲಿ ಹೀಗೆ ಮಾಡೋದಕ್ಕೆ ಹೋಗಬಾರದು.
ಈ ಪ್ರಕರಣದಲ್ಲೂ ರಾಜಕೀಯ ಮಾಡಲು ಹೋಗಬಾರದು ಎಂದು ತನ್ನ ರಾಜೀನಾಮೆಗೆ ಒತ್ತಾಯಿಸಿದ ಕಾಂಗ್ರೆಸ್ ಗೆ ಟಾಂಗ್ ನೀಡಿದ್ದಾರೆ.
ಇನ್ನು ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಅರಗ ಜ್ಞಾನೇಂದ್ರ, ಮೊನ್ನೆ ಸಂಜೆ 7.30- 8 ಗಂಟೆ ಸಮಯದಲ್ಲಿ ಘಟನೆ ನಡೆದಿದೆ.
ಘಟನೆ ನಡೆದ 12 ಗಂಟೆ ಒಳಗೆ ಎಫ್‍ಐಆರ್ ದಾಖಲು ಮಾಡಲಾಗಿದೆ. ಸಂತ್ರಸ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಲಾಗ್ತಿದೆ. ಸಂತ್ರಸ್ತೆ ಶಾಕ್ ನಲ್ಲಿ ಇದ್ದಾರೆ. ಹೀಗಾಗಿ ಸಂಪೂರ್ಣ ಹೇಳಿಕೆ ಪಡೆಯಲು ಆಗ್ತಿಲ್ಲ.
ಆದರೂ ನಮ್ಮ ಪೊಲೀಸರು ಕೇಸ್ ದಾಖಲು ಮಾಡಿಕೊಂಡು ತನಿಖೆ ಮಾಡ್ತಿದ್ದಾರೆ ಎಂದು ತಿಳಿಸಿದರು.









