ಚಿತ್ರದುರ್ಗ : ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ತಾಕತ್ತು ಏನು ಎಂಬುದನ್ನು ಮೂರು ನಾಲ್ಕು ಬಾರಿ ಸಾಬೀತುಪಡಿಸಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.
ಇಂದು ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸಬರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳ ತಾಕತ್ ಏನು ಅಂತ ಮೂರು ನಾಲ್ಕು ಬಾರಿ ಸಾಬೀತುಪಡಿಸಿದ್ದಾರೆ. ಅಲ್ಲದೆ ಕೇಂದ್ರದಿಂದ ಬರಬೇಕಿದ್ದ ಜಿಎಸ್ ಟಿ ಹಣವನ್ನು ತಂದಿದ್ದಾರೆ.
ಯಡಿಯೂರಪ್ಪ ನಾಲ್ಕನೇ ಬಾರಿ ಮುಖ್ಯಮಂತ್ರಿ ಆಗಿ ಸಮರ್ಥವಾಗಿ ಆಡಳಿತ ನೀಡಿದ್ದಾರೆ. ಆದರೆ ಸಿದ್ದರಾಮಯ್ಯ ಒಂದು ಬಾರಿ ಐದು ವರ್ಷ ಆಡಳಿತ ಪೂರೈಸಿ ಈಗ ವಿರೊಧ ಪಕ್ಷದಲ್ಲಿ ಕುಳಿತಿದ್ದಾರೆ ಎಂದು ವ್ಯಂಗ್ಯ ಮಾಡಿದರು.
ಒಟ್ಟಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ನಡೆಸಿದ ವಾಗ್ದಾಳಿಗೆ ಮರು ವಾಗ್ದಾಳಿ ಸಚಿವರು ಮಾಡುತ್ತಿದ್ದಾರೆ. ಆ ಮೂಲಕ ತಮ್ಮ ನಾಯಕ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಕೆ.ಎಸ್. ಈಶ್ವರಪ್ಪ ಸಹ ಧಮ್ ಬಗ್ಗೆ ಮಾತನಾಡುವ ಯೋಗ್ಯತೆಯಿಲ್ಲ ಎನ್ನುವ ಮೂಲಕ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ ನಡೆಸಿದ್ದರು.