ಬೆಂಗಳೂರು: ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೂ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ಇನ್ನೂ ಯಾವುದೇ ರೋಗ ಲಕ್ಷಣಗಳು ಇಲ್ಲದೇ ಇರುವ ಕಾರಣ ವೈದ್ಯರ ಸಲಹೆಯ ಮೇರೆಗೆ ಗೃಹ ಸಚಿವರು ಮನೆಯಲ್ಲಿಯೇ ಐಸೊಲೇಷನ್ ನಲ್ಲಿದ್ದಾರೆ. ಇತ್ತೀಚೆಗಷ್ಟೇ ಬಸವರಾಜ ಬೊಮ್ಮಾಯಿ ಅವರ ಮನೆಯ ಕೆಲಸದ ಹುಡುಗನಿಗೆ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಸಚಿವರು ಸಹ ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆಗೆ ಒಳಪಟ್ಟ ವೇಳೆ ಪಾಸಿಟಿವ್ ಇರುವುದು ಪತ್ತೆಯಾಗಿದೆ.
ಇನ್ನೂ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿರುವ ಬೊಮ್ಮಾಯಿ ಅವರು “ನನಗೂ ಸಹ ಸೋಂಕು ದೃಢಪಟ್ಟಿದೆ. ಯಾವುದೇ ರೀತಿಯ ರೋಗ ಲಕ್ಷಣಗಳು ಇರುವುದಿಲ್ಲ ಹಾಗೂ ಆರೋಗ್ಯವಾಗಿದ್ದೇನೆ. ಇತ್ತೀಚೆಗೆ ನನ್ನ ನೇರ ಸಂಪರ್ಕಕ್ಕೆ ಬಂದಿರುವವರು ಕೂಡಲೇ ಪರೀಕ್ಷೆಗೆ ಒಳಪಡುವಂತೆ ಹಾಗೂ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಕೋರುತ್ತೇನೆ ” ಎಂದು ಮನವಿ ಮಾಡಿಕೊಂಡಿದ್ದಾರೆ.