ಎಲೆಕ್ಟ್ರಾನಿಕ್ ಸಿಟಿ ಸಮೀಪದ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ವಿಚಾರಿಸಲು ಗೃಹ ಸಚಿವ ಜಿ. ಪರಮೇಶ್ವರ್ ಇಂದು ಭೇಟಿ ನೀಡಿದರು.
ಆಸ್ಪತ್ರೆಗೆ ಭೇಟಿ ನೀಡಿದ ಅವರು ವೈದ್ಯರೊಂದಿಗೆ ಚರ್ಚಿಸಿ, ಸಚಿವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಕುಟುಂಬಸ್ಥರನ್ನು ಭೇಟಿ ಮಾಡಿ ಧೈರ್ಯ ತುಂಬಿದರು.
ಈ ವೇಳೆ ಮಾತನಾಡಿದ ಗೃಹ ಸಚಿವರು, ಸಚಿವರ ಆರೋಗ್ಯ ಸಹಜ ಸ್ಥಿತಿಯಲ್ಲಿದ್ದು, ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದರು. ಆದರೆ ಅವರ ಮೆದುಳು ಸಾಮಾನ್ಯ ಸ್ಥಿತಿಗೆ ಮರಳಲು ಇನ್ನೂ ಸಮಯ ಹಿಡಿಯಬಹುದು ಎಂದು ತಿಳಿಸಿದ್ದಾರೆ.
ಇನ್ನೂ ಅವರಿಗೆ ಪ್ರಜ್ಞೆ ಬಂದಿಲ್ಲ, ಪ್ರಜ್ಞೆ ಬರಲು ವೈದ್ಯರು ಕಾಯುತ್ತಿದ್ದಾರೆ. ಸದ್ಯ ಚಿಕಿತ್ಸೆ ಮುಂದುವರೆದಿದ್ದು, ವೈದ್ಯರು ನಿಕಟವಾಗಿ ಗಮನಹರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.







