Amarnath Yatra: ಜೂನ್ 30 ರಿಂದ ಅಮರನಾಥ ಯಾತ್ರೆ | ಭದ್ರತೆ ಸಂಬಂಧ ಉನ್ನತ ಮಟ್ಟದ ಸಭೆ
1 min read
ಜೂನ್ 30 ರಿಂದ ಅಮರನಾಥ ಯಾತ್ರೆ | ಭದ್ರತೆ ಸಂಬಂಧ ಉನ್ನತ ಮಟ್ಟದ ಸಭೆ
ನವದೆಹಲಿ: ಜೂನ್ 30 ರಿಂದ ಅಮರನಾಥ ಯಾತ್ರೆ ಪ್ರಾರಂಭವಾಗಲಿದ್ದು, ಈ ಸಂಬಂಧ ಯಾತ್ರೆಯ ಭದ್ರತೆ ಕೈಗೊಳ್ಳಲಾಗಿದೆ.
ಅಮರನಾಥ ಯಾತ್ರೆಯ ಭದ್ರತೆಯ ಬಗ್ಗೆ ಗುಪ್ತಚರ ಇಲಾಖೆ ನಿರ್ದೇಶಕ ಅಜಯ್ ಕುಮಾರ್ ಭಲ್ಲಾ ನೇತೃತ್ವದಲ್ಲಿ ಪರಿಶೀಲನಾ ಸಭೆ ನಡೆದಿದೆ. ಈ ಸಭೆಯಲ್ಲಿ ಯಾತ್ರೆಗೆ ನಿಯೋಜಿಸಿರುವ ಭದ್ರತೆಯ ಬಗ್ಗೆ ಅವರು ಮಾಹಿತಿ ಪಡೆದುಕೊಂಡರು.
ಕಾಶ್ಮೀರಕ್ಕೆ ಎರಡು ದಿನಗಳ ಪ್ರವಾಸ ತೆರಳಿದ್ದ ಗುಪ್ತಚರ ಇಲಾಖೆ ನಿರ್ದೇಶಕ ಅರವಿಂದ್ ಕುಮಾರ್ ಶುಕ್ರವಾರ ಅಜಯ್ ಕುಮಾರ್ ಭಲ್ಲಾ ಜೊತೆಗೆ ಮೊದಲ ಹಂತದ ಸಭೆ ನಡೆಸಿದರು. ಸಭೆಯಲ್ಲಿ ಕಾಶ್ಮೀರ ಪೊಲೀಸ್ ಉನ್ನತ ಅಧಿಕಾರಿಗಳು ಭಾಗಿಯಾಗಿದ್ದರು.
ಅಮರನಾಥ ಯಾತ್ರೆಗೆ ಭದ್ರತೆ ಮುಖ್ಯವಾಗಿದ್ದು, ಭಯೋತ್ಪಾದನೆ ಚಟುವಟಿಕೆಗಳು ನಡೆಯುವ ಸಾಧ್ಯತೆಗಳಿರುತ್ತವೆ. ಈ ಹಿನ್ನೆಲೆ ಭದ್ರತಾ ಪಡೆಗಳ ನಿಯೋಜನೆ ಬಗ್ಗೆ ಇಂದಿನ ಸಭೆಯಲ್ಲಿ ಪರಿಶೀಲನೆ ನಡೆಸಲಾಯಿತು. ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಎರಡನೇ ಸಭೆ ನಡೆಯಲಿದೆ ಎಂದು ಗೃಹ ಇಲಾಖೆಯ ಮೂಲಗಳು ತಿಳಿಸಿವೆ.
ಅಮರನಾಥ ಯಾತ್ರೆಗೆ ಏಪ್ರಿಲ್ 11 ರಿಂದ ಯಾತ್ರೆಗೆ ಭಕ್ತಾದಿಗಳ ನೋಂದಣಿ ಆರಂಭವಾಗಿದೆ. ಜೂನ್ 30 ರಿಂದ ಅಗಸ್ಟ್ 11 ವರೆಗೂ ಯಾತ್ರೆ ನಡೆಸಲು ತಿರ್ಮಾನಿಸಲಾಗಿದ್ದು, ಯಾತ್ರೆ ಕೈಗೊಳ್ಳುವ ಭಕ್ತಾದಿಗಳು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ತಿಳಿಸಲಾಗಿದೆ.
ಶ್ರೈನ್ ಬೋರ್ಡ್ನ ವೆಬ್ಸೈಟ್ ಅಥವಾ ಮೂಬೈಲ್ ಅಪ್ಲಿಕೇಶನ್ ಮೂಲಕ ನೋಂದಣಿ ಮಾಡಿಕೊಳ್ಳಲು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಈ ವರ್ಷ ಮೂರು ಲಕ್ಷ ಜನರು ಯಾತ್ರೆ ಮಾಡುವ ನಿರೀಕ್ಷೆಯಿದೆ. ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ 3,000 ಜನರು ಉಳಿದುಕೊಳ್ಳಲು ವ್ಯವಸ್ಥೆ ಇರುವ ಯಾತ್ರಿ ನಿವಾಸ ನಿರ್ಮಾಣ ಮಾಡಲಾಗಿದ್ದು ಅಲ್ಲಿ ಭಕ್ತಾಧಿಗಳು ತಂಗಲು ಅವಕಾಶ ಮಾಡಿಕೊಡಲಾಗಿದೆ.