ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಹೋಂಸ್ಟೇಗಳು ಪ್ರವಾಸೋದ್ಯಮ ಇಲಾಖೆಯಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ಸೂಚಿಸಿದೆ.
ಈವರೆಗೆ 500ಕ್ಕೂ ಹೆಚ್ಚು ಹೋಂಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿ ಸಲ್ಲಿಸಿದ್ದು, ಅವುಗಳಲ್ಲಿ ಸುಮಾರು 400 ಅರ್ಜಿಗಳ ದಾಖಲೆ ಪರಿಶೀಲನೆ ಪೂರ್ಣಗೊಂಡಿದೆ.
ಇನ್ನೂ ನೋಂದಣಿ ಮಾಡಿಸದಿರುವ ಅರ್ಹ ಹೋಂಸ್ಟೇ ಮಾಲೀಕರು ಶೀಘ್ರದಲ್ಲೇ ಪ್ರವಾಸೋದ್ಯಮ ಇಲಾಖೆಯ ಮೂಲಕ ಅಧಿಕೃತವಾಗಿ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಸಲ್ಲಿಸಲಾದ ಅರ್ಜಿಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ಬಳಿಕವೇ ನೋಂದಣಿ ಪ್ರಮಾಣಪತ್ರ ನೀಡಲಾಗುವುದು. ನಿಯಮಗಳನ್ನು ಪಾಲಿಸದ ಹಾಗೂ ನೋಂದಣಿ ಮಾಡಿಸದ ಹೋಂಸ್ಟೇಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅಗತ್ಯವಿದ್ದರೆ ಅವರ ಮಾನ್ಯತೆಯನ್ನು ರದ್ದುಗೊಳಿಸುವ ಸಾಧ್ಯತೆಯೂ ಇದೆ.








