ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗಾಗಿ ರಾಜ್ಯ ಸರ್ಕಾರದಿಂದ ಮತ್ತೆ ಒಳ್ಳೆಯ ಸುದ್ದಿ ಬಂದಿದೆ. ಈಗಾಗಲೇ ಹಿಂದಿನ ಬಜೆಟ್ನಲ್ಲಿ 1,000 ರೂ. ಗೌರವಧನ ಹೆಚ್ಚಳ ಘೋಷಿಸಿತ್ತು. ಇದೀಗ ಮುಂದಿನ ಬಜೆಟ್ನಲ್ಲಿಯೂ ಹೆಚ್ಚುವರಿ ₹1,000 ರೂ. ಗೌರವಧನ ಹೆಚ್ಚಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ ಅವರು,
ಅಂಗನವಾಡಿ ಕಾರ್ಯಕರ್ತೆಯರು—ಸಹಾಯಕಿಯರ ಸಮಸ್ಯೆಗಳು, ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಈಗಾಗಲೇ ಚರ್ಚೆ ನಡೆದಿದೆ. ಸರ್ಕಾರ ಈ ಬೇಡಿಕೆಯನ್ನು ಸಕಾರಾತ್ಮಕವಾಗಿ ಪರಿಗಣಿಸಿದ್ದು, ಹೊಸ ಬಜೆಟ್ನಲ್ಲಿ ದೊಡ್ಡ ಮಟ್ಟದ ಪರಿಹಾರ ಸಿಗಲಿದೆ ಎಂದು ಹೇಳಿದರು.
ಗೃಹಲಕ್ಷ್ಮೀ ಸಹಕಾರ ಬ್ಯಾಂಕ್ ಮೂಲಕ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ₹30,000 ರಿಂದ ₹5 ಲಕ್ಷ ವರೆಗೆ ಸಾಲ ನೀಡುವ ಯೋಜನೆ ರೂಪಿಸಲಾಗಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.
ಇದರಿಂದ ಮಹಿಳೆಯರು ಸ್ವಯಂ ಉದ್ಯೋಗ, ಕುಟುಂಬದ ಆರ್ಥಿಕ ಬಲವರ್ಧನೆ ಮತ್ತು ದಿನನಿತ್ಯದ ಆರ್ಥಿಕ ಒತ್ತಡ ನಿವಾರಣೆಗೆ ನೆರವಾಗಲಿದೆ.
ರಾಜ್ಯಾದ್ಯಂತ ಸಾವಿರಾರು ಅಂಗನವಾಡಿ ಕಾರ್ಯಕರ್ತೆಯರು ಈ ಘೋಷಣೆಯನ್ನು ಸ್ವಾಗತಿಸಿದ್ದು, ಮುಂದಿನ ಬಜೆಟ್ಗೆ ದೊಡ್ಡ ನಿರೀಕ್ಷೆ ಮೂಡಿದೆ.








