Ananth Nag | ಅನಂತ್ ನಾಗ್ ಗೆ ಗೌರವ ಡಾಕ್ಟರೇಟ್ ಪ್ರದಾನ
ಅಭಿನಯ ಬ್ರಹ್ಮ ನಟ ಅನಂತ್ ನಾಗ್ ಅವರಿಗೆ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ.
ಬೆಂಗಳೂರಿನ ಭಾರತೀಯ ವಿದ್ಯಾಭವನದ ಬಿಂಚಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವರು ಮತ್ತು ಸಮಕುಲಾಧಿಪತಿಗಳಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಗೌರವ ಪದವಿ ಪ್ರದಾನ ಮಾಡಿದರು.
ಅನಂತ್ ನಾಗ್, ಖ್ಯಾತ ಶಹನಾಯ್ ವಾದಕ ಬಿಸ್ಮಿಲ್ಲಾ ಖಾನ್ ಅವರ ಶಿಷ್ಯ ಎಸ್.ಬಲ್ಲೇಶ್ ಭಜಂತ್ರಿ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಶರತ್ ಶರ್ಮಾ ಅವರಿಗೆ ಕೂಡ ಈ ಸಾಲಿನ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸದಾಶಿವ ಶೆಣೈ, ಭಾರತೀಯ ವಿದ್ಯಾಭವನದ ನಿರ್ದೇಶಕ ಹೆಚ್. ಎನ್.ಸುರೇಶ್ ಭಾಗಿಯಾಗಿದ್ದರು.