Puneeth Rajkumar | ನಟ ಪುನೀತ್ ರಾಜ್ಕುಮಾರ್ಗೆ ಗೌರವ ಡಾಕ್ಟರೇಟ್
ಮೈಸೂರು ವಿಶ್ವವಿದ್ಯಾಲಯದಿಂದ ಅಪ್ಪುಗೆ ಡಾಕ್ಟರೇಡ್
ಪುನೀತ್ ರಾಜ್ ಕುಮಾರ್ ಹುಟ್ಟುಹಬ್ಬ ಹಿನ್ನೆಲೆ
ವಿವಿ ಕುಲಪತಿ ಪ್ರೋ ಹೇಮಂತ್ ಕುಮಾರ್ ಮಾಹಿತಿ
ಮಾರ್ಚ್ 22ಕ್ಕೆ ಮೈಸೂರು ವಿವಿ 102ನೇ ಘಟಿಕೋತ್ಸವ
ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿಶ್ವ ವಿದ್ಯಾನಿಲಯದಿಂದ ಮರಣೋತ್ತರ ಗೌರವ ಡಾಕ್ಟರೇಟ್ ನೀಡುವುದಾಗಿ ಘೋಷಣೆ ಮಾಡಿದೆ.
ಈ ಬಗ್ಗೆ ಮೈಸೂರು ವಿಶ್ವವಿದ್ಯಾನಿಯಲದ ಕುಲಪತಿ ಪ್ರೋ ಹೇಮಂತ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಮಾರ್ಚ್ 22 ಕ್ಕೆ ಮೈಸೂರು ವಿಶ್ವ ವಿದ್ಯಾನಿಯಲದ 102ನೇ ಘಟಿಕೋತ್ಸವ ಕಾರ್ಯಕ್ರಮ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ಕೊಡಲಾಗುವುದು.
ಚಲನಚಿತ್ರ ನಟ ದಿವಂಗತ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಡಾಕ್ಟರೇಟ್, ಹಿರಿಯ ವಿಜ್ಞಾನಿ ಡಾ.ವಿ.ಎಸ್.ಅತ್ರೆ ಮತ್ತು ಜನಪದ ಗಾಯಕ ಮಳ್ಳವಳ್ಳಿ ಮಹಾದೇವಸ್ವಾಮಿ ಅವರಿಗೆ ಗೌರವ ಡಾಕ್ಟರೇಟ್ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು ಪುನೀತ್ ರಾಜಕುಮಾರ್ ಕುಟುಂಬದವರನ್ನ ನಾವು ಈಗಾಗಲೇ ಸಂಪರ್ಕ ಮಾಡಿದ್ದೇವೆ. ಪುನೀತ್ ಪತ್ನಿ ಅಶ್ವಿನಿ ಅವರು ಘಟಿಕೋತ್ಸವಕ್ಕೆ ಬರಲು ಒಪ್ಪಿದ್ದಾರೆ ಎಂದಿದ್ದಾರೆ .
ಅಂದಹಾಗೇ ವರನಟ ಡಾ.ರಾಜ್ ಕುಮಾರ್ ಗೂ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ನೀಡಲಾಗಿತ್ತು.
46 ವರ್ಷದ ಹಿಂದೆ ತಂದೆಗೆ ಗೌರವ ಡಾಕ್ಟರೇಟ್ ನೀಡಿದ್ದಂತ ಮೈಸೂರು ವಿವಿ, ಈಗ ಅವರ ಪುತ್ರ ಪುನೀತ್ ರಾಜ್ ಕುಮಾರ್ ಗೂ ಗೌರವ ಡಾಕ್ಟರೇಟ್ ನೀಡುತ್ತಿದೆ. Honorary doctorate for actor Puneeth Rajkumar