ಬೆಂಗಳೂರು: ನಗರದ ಹೊರವಲಯದಲ್ಲಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಹೋಟೆಲ್ ನಲ್ಲಿ ಊಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಮನಸ್ಸೋ ಇಚ್ಛೆ ದಾಳಿ ನಡೆಸಿದ್ದಾರೆ. ಮಂಜುನಾಥ್ ಎಂಬ ವ್ಯಕ್ತಿಯ ದಾಳಿ ನಡೆದಿದೆ. ದಾಳಿಯಲ್ಲಿ ಕೈ ಕತ್ತರಿಸಿ, ಕಾಲು ದೇಹದ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಈ ಘಟನೆ ಬೆಂಗಳೂರಿನ ದೇವನಹಳ್ಳಿಯ ವಿಶ್ವನಾಥಪುರದಲ್ಲಿ ನಡೆದಿದೆ. ಶ್ರೀರಾಮ್ ಎಂಬುವನೇ ದಾಳಿ ಮಾಡಿ ಪರಾರಿಯಾಗಿದ್ದಾನೆ. ಹಲ್ಲೆಗೊಳಗಾದ ಮಂಜುನಾಥ್, ಶ್ರೀರಾಮ್ ನ ಅತ್ತೆ ಮಗ. ತಂದೆ ಕೊಲೆ ಪ್ರಕರಣದಲ್ಲಿ ಸಹಾಯಕ್ಕೆ ಬಂದಿಲ್ಲವೆಂದು ಶ್ರೀರಾಮ್, ಮಂಜುನಾಥ್ ಮೇಲೆ ದ್ವೇಷ ಬೆಳೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.
ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮಂಜುನಾಥ್ ನ ಕೈ ಕತ್ತರಿಸಿ, ಕಾಲು ದೇಹದ ಮೇಲೆ ಲಾಂಗ್ ಬೀಸಿ ಪರಾರಿಯಾಗಿದ್ದಾರೆ
ರಾಜ್ಯಾದ್ಯಂತ ಮಾರ್ಚ್ 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಮಹಾಪರ್ವ ಆರಂಭ: ವಿದ್ಯಾರ್ಥಿಗಳು ಮತ್ತು ಪೋಷಕರು ತಿಳಿಯಲೇಬೇಕಾದ ಕಟ್ಟುನಿಟ್ಟಿನ ನಿಯಮಗಳೇನು ಗೊತ್ತಾ?
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಿಗೆ ಅಧಿಕೃತ ಚಾಲನೆ ನೀಡಲು ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ಅತಿ...








