Hosakote | ಲಾರಿಗೆ ಕೆಎಸ್ ಆರ್ ಟಿಬಿ ಬಸ್ ಡಿಕ್ಕಿ | ಇಬ್ಬರು ಸಾವು
ಬೆಂಗಳೂರು : ಲಾರಿಗೆ ಹಿಂದಿನಿಂದ ಬಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಹೊಸಕೋಟೆ ಮತ್ತು ಕೋಲಾರ ರಸ್ತೆಯಲ್ಲಿ ನಡೆದಿದೆ.
ಹೊಸಕೋಟೆ ಕೋಲಾರ ರಾಷ್ಟ್ರೀಯ ಹೆದ್ದಾರಿಯ ಮೈಲಾಪುರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ. 20 ಮಂದಿಗೂ ಹೆಚ್ಚು ಜನ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ಬಳಿಕ ಬಸ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್ ಪಿ ಮಲ್ಲಿಕಾರ್ಜುನ್ ಬಾಲದಂಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Hosakote Accident