Hospet ಹೊಸಪೇಟೆ | ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕೊರೊನಾ ಸ್ಫೋಟ
ಹೊಸಪೇಟೆ : ಕೊಟ್ಟೂರು ತಾಲೂಕಿನ ಕಂದಗಲ್ಲು ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಕಾಲೇಜಿನಲ್ಲಿ ಕೊರೊನಾ ಸೋಂಕು ತಾಂಡವಾಡಿದ್ದು, ಬರೋಬ್ಬರಿ 65 ಮಂದಿಗೆ ಸೋಂಕು ವಕ್ಕರಿಸಿದೆ.
ಎಸ್ ಎಸ್ ಎಲ್ ಸಿಯ 9 ವಿದ್ಯಾರ್ಥಿಗಳು, ಪಿಯುಸಿಯ 23 ವಿದ್ಯಾರ್ಥಿಗಳು ಮತ್ತು ಕಾಲೇಜಿನ ಒಬ್ಬ ಸಿಬ್ಬಂದಿಗೆ ಸೋಂಕು ವಕ್ಕರಿಸಿದೆ.
ಕೊರೊನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಸೇರಿ 200 ಕ್ಕೂ ಅಧಿಕ ಜನ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕದಲ್ಲಿದ್ದವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇತ್ತ ಕೊರೊನಾ ಪ್ರಕರಣಗಳು ವರದಿಯಾಗುತ್ತಿದ್ದಂತೆ ಹಾಸ್ಟಲ್ ನಲ್ಲಿರುವ ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದ್ದು, ಪೋಷಕರು ಗಾಬರಿಗೊಂಡಿದ್ದಾರೆ.
