ಮಾಂಗಲ್ಯಾಭರಣೈರ್ಯುಕ್ತೇ ಮಂಗಳೇ ಸರ್ವಮಂಗಳೇ |
ಗೃಹಲಕ್ಷ್ಮಿರ್ಧಾನ್ಯಲಕ್ಷ್ಮಿರ್ದ್ವಾರಲಕ್ಷ್ಮಿರ್ನಮೋಽಸ್ತುತೇ ||
ಸ್ತ್ರೀಯರಿಗೆ ಲಕ್ಷ್ಮಿದೇವಿಯ ಆರಾಧನೆಗೆ ಹಲವು ಪ್ರತೀಕಗಳಿವೆ. ಅವುಗಳಲ್ಲಿ, ಹೊಸ್ತಿಲು ಮತ್ತು ತುಳಸೀವೃಂದಾವನ ಪೂಜೆ ಪ್ರಮುಖವಾದವು. ಮನೆಯ ಮುತ್ತೈದೆಯರೆಲ್ಲರೂ ಹೊಸ್ತಿಲಿನಲ್ಲಿ ಲಕ್ಷ್ಮೀಭಾರತಿಯರನ್ನು ಪೂಜಿಸಬೇಕು. ಹೊಸ್ತಿಲು ಮತ್ತು ತುಳಸೀವೃಂದಾವನ ಪೂಜೆಯನ್ನು ಕನ್ಯೆಯರೂ ಕಡ್ಡಾಯವಾಗಿ ಮಾಡತಕ್ಕದ್ದು. ಸ್ನಾನಕ್ಕೆ ಮೊದಲೇ ಹೊಸ್ತಿಲು ಬಳಿದು, ಸ್ವಸ್ತಿಕೆ ಬರೆದು, ಅಲಂಕರಿಸಿ ಸ್ನಾನಾನಂತರ ಪೂಜಿಸಬಹುದು.
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
ಕೆಲವೆಡೆ ಸ್ನಾನಾನಂತರ ಹೊಸ್ತಿಲು ಬರೆಯುವ ಸಂಪ್ರದಾಯವಿದೆ. ಶಾಸ್ತ್ರರೀತ್ಯಾ ಸ್ನಾನಾನಂತರದ ಹೊಸ್ತಿಲಪೂಜೆ ಉತ್ತಮ.
ಶುದ್ಧಜಲಪೂರ್ಣವಾದ ತಂಬಿಗೆಯನ್ನು ಹೊಸ್ತಿಲ ಮಧ್ಯದಲ್ಲಿಟ್ಟು ಮಂಗಳದ್ರವ್ಯಗಳಿಂದ ಪೂಜಿಸಿ, ಹೊಸ್ತಿಲಿಗೆ ಅರ್ಪಿಸಿದ್ದ ಒಂದು ಹೂವನ್ನು ಮುಡಿದುಕೊಂಡು, ಕೈತೊಳೆದು, ತಂಬಿಗೆಯನ್ನು ಕೆಳಗಿಳಿಸಬೇಕು (ಹೊಸ್ತಿಲುಪೂಜೆ ಮುಗಿಯುವ ತನಕ ಯಾರೂ ಹೊಸ್ತಿಲು ದಾಟಬಾರದು,).
ಗೃಹದ ಪ್ರಧಾನದ್ವಾರವನ್ನು ಹೊಸ್ತಿಲುಪೂಜೆಗಾಗಿ ಆರಿಸಿಕೊಳ್ಳಬೇಕು. ಅನುಕೂಲತೆ ಹಾಗೂ ಶುದ್ಧಿಯ ಕಾರಣಗಳಿಂದ ದೇವರ ಕೋಣೆಯ ದ್ವಾರವನ್ನು ಪೂಜಿಸಿದರೂ, ಪ್ರಧಾನದ್ವಾರದಲ್ಲೂ ರಂಗೊಲಿ ಇರಬೇಕು. ”ಅಶೂನ್ಯಾ ದೇಹಲೀ ಕಾರ್ಯಾ…” ಎಂಬಂತೆ ಹೊಸ್ತಿಲು ಬೋಳಾಗಿರಕೂಡದು. ಕಸಕಡ್ಡಿಗಳಿಂದ ತುಂಬಿರಕೂಡದು. ಗೃಹವಸ್ತುಗಳನ್ನು ಹೊಸ್ತಿಲಲ್ಲಿಡಕೂಡದು. ಕೆಲವೆಡೆ ಮನೆಯೊಳಗಿದ್ದೇ ಹೊಸ್ತಿಲ ಪೂಜೆಯನ್ನು ಮಾಡುತ್ತಾರೆ. (ಹೊರಗಿನಿಂದ ಒಳಮುಖವಾಗಿ ಮಾಡಬಾರದು). ಆದರೂ , ಹೊಸ್ತಿಲ ಹೊರಗೆ ನಿಂತು ಆಕೆಯನ್ನು ಆಹ್ವಾನಿಸುವ ಮತ್ತು ಆವಾಹಿಸುವ ಪೂಜಿಸುವ ಸಂಪ್ರದಾಯವು ಕೆಲವೆಡೆ ಪ್ರಚಲಿತವಾಗಿರುತ್ತದೆ.
ಲೇಖನ:
ಧಾರ್ಮಿಕಚಿಂತಕರು ಮತ್ತು ಸಲಹೆಗಾರರು
ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನ
ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564