ಚೆನ್ನೈ: ಅಯೋಧ್ಯೆಯಲ್ಲಿ (Ayodhya) ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದ್ದು, ಹಬ್ಬದ ವಾತಾವರಣ ನಿರ್ಮಾಣವಾಗುತ್ತಿದೆ. ಈ ಹಬ್ಬಕ್ಕೆ ಸಾಕ್ಷಿಯಾಗಲು ಹಲವಾರು ಕಡೆಗಳಿಂದ ಭಕ್ತಿಪೂರ್ವಕ ಕಾಣಿಕೆಗಳನ್ನು ಕಳುಹಿಸಲಾಗುತ್ತಿದೆ.
ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ (Ramamandir) ಉದ್ಘಾಟನೆಗೊಳ್ಳಲಿದೆ. ಹೀಗಾಗಿ ಭಕ್ತರು ಕಾಣಿಗೆ ಅರ್ಪಿಸುತ್ತಿದ್ದಾರೆ. ಸದ್ಯ ತಮಿಳುನಾಡಿನಿಂದ ಭಕ್ತರು 1200 ಕೆಜಿಯ 42 ಗಂಟೆಗಳನ್ನು ಕಳುಹಿಸಿದ್ದಾರೆ. ನಾಮಕ್ಕಲ್ ಜಿಲ್ಲೆಯಲ್ಲಿ ಘಂಟೆಗಳು ತಯಾರಾಗಿವೆ. ಅವುಗಳಿಗೆ ವಿಶೇಷ ಪೂಜೆ ಮಾಡಿ ರಾಮನಿದ್ದಲ್ಲಿಗೆ ಕಳುಹಿಸಲಾಗುತ್ತಿದೆ.