ಬೆಳಗಾವಿ: ದೇಶದ ಪ್ರತಿ ಕುಟುಂಬಕ್ಕೂ 2022ರ ವೇಳೆಗೆ ಸೂರು ಒದಗಿಸಲಾಗುವುದು ಎಂದು ರೈಲ್ವೆ ಇಲಾಖೆಯ ರಾಜ್ಯ ಸಚಿವ ಸುರೇಶ್ ಅಂಗಡಿ ಅವರು ಹೇಳಿದ್ದಾರೆ.
ಸುವರ್ಣ ವಿಧಾನಸೌಧದಲ್ಲಿ ಮಾತನಾಡಿದ ಅವರು, ಎಲ್ಲರಿಗೂ ಮನೆ ಹೊಂದಬೇಕು ಎಂಬ ಆಸೆ ಇರುತ್ತದೆ. ಇದನ್ನು ಸಾಕಾರಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. 2022ರ ವೇಳೆಗೆ ಎಲ್ಲರಿಗೂ ಸೂರು ಒದಗಿಸಬೇಕು ಎಂಬುದು ಪ್ರಧಾನಮಂತ್ರಿಗಳ ಕನಸಾಗಿದೆ ಎಂದರು.
ಬೆಳಗಾವಿ ಜಿಲ್ಲೆಯಲ್ಲಿ ವಸತಿ ಹಾಗೂ ಕುಡಿಯುವ ನೀರು ಯೋಜನೆ ಅನುಷ್ಠಾನಗೊಳಿಸುವುದಕ್ಕೆ ಸಂಬಂಧಿಸಿದಂತೆ ಸಮಗ್ರ ಯೋಜನೆಯೊಂದನ್ನು ಮಾರ್ಚ್ 31 ರೊಳಗೆ ರೂಪಿಸಬೇಕು. ಪರಿಶಿಷ್ಟ ಜಾತಿ ಪಂಗಡದವರಿಗೆ 3.50 ಲಕ್ಷ ಹಾಗೂ ಸಾಮಾನ್ಯ ವರ್ಗದವರಿಗೆ ಮನೆ ನಿರ್ಮಿಸಿಕೊಡಲು 2.70ಲಕ್ಷ ನೆರವು ನೀಡಲಾಗುತ್ತದೆ ಎಂದು ವಿವರಿಸಿದರು.
ಇದೇ ವೇಳೆ ನಗರ ವಸತಿ ಯೋಜನೆ ಅನುಷ್ಠಾನ ಚುರುಕುಗೊಳಿಸಲು ಪ್ರತ್ಯೇಕ ಕಚೇರಿಯೊಂದನ್ನು ತೆರೆಯುವಂತೆ ಅಧಿಕಾರಿಗಳಿಗೆ ಸಚಿವರು ಸಲಹೆ ನೀಡಿದರು.
ವರದಕ್ಷಿಣೆ ಕಿರುಕುಳ: ನೇಣಿಗೆ ಶರಣಾದ ರೂಪಾ
ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ಅಮೂಲ್ಯ ಜೀವವನ್ನು ಕಸಿದುಕೊಂಡಿದೆ. ಈ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಗುಮ್ಮನಹಳ್ಳಿಯಲ್ಲಿ ನಡೆದಿದೆ, ಅಲ್ಲಿ ರೂಪಾ ಎಂಬ 29 ವರ್ಷದ...