ಕೋಲಾರ: ಅನುಮಾನಾಸ್ಪದ ರೀತಿಯಲ್ಲಿ ಮಹಿಳೆ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಇಲ್ಲಿಯ ಮಿಲ್ಲತ್ ನಗರದಲ್ಲಿ ನಡೆದಿದ್ದು, ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಗಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ಮಾಹೇನೂರ್ (22) ಎಂದು ಗುರುತಿಸಲಾಗಿದೆ.
ಪತಿ ಸಯ್ಯದ್ ಶುಹೇಬ್ ಕೊಲೆ ಮಾಡಿ ಗ್ಯಾಸ್ ಗೀಸರ್ ಲೀಕ್ ನಿಂದ ಸಾವನ್ನಪ್ಪಿದ್ದಾಳೆ ಎಂದು ಬಿಂಬಿಸಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಣ, ಜಾಗ ಹಾಗೂ ಬುಲೆಟ್ ಬೈಕ್‍ಗಾಗಿ ಪತ್ನಿಯ ತವರಿನಿಂದ ಹಣ ತರುವಂತೆ ಪೀಡಿಸುತ್ತಿದ್ದ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈತ ಹೆಚ್ಚು ಪೀಡಿಸುತ್ತಿರುವ ಹಿನ್ನೆಲೆಯಲ್ಲಿ ಮೂರು ಬಾರಿ ನ್ಯಾಯ ಪಂಚಾಯ್ತಿ ಮಾಡಿದ್ದೇವೆ. ಹೀಗಾಗಿ ಗಲಾಟೆ ನಡೆಸಿ ಮಹಿಳೆಯ ಹತ್ಯೆ ಮಾಡಲಾಗಿದೆ ಎಂದು ಸಂಬಂಧಿಕರು ಹೇಳಿದ್ದಾರೆ.
ಈ ಕುರಿತು ಗಲ್ ಪೇಟೆ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣದ ದಾಖಲಾಗಿದ್ದು, ವ್ಯಕ್ತಿಯನ್ನು ಬಂಧಿಸಿರುವ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.