ರಾಜ್ಯದ ಸರ್ಕಾರಿ ಹಾಗೂ ಖಾಸಗಿ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಬೇಕೆಂಬ ಶಿಫಾರಸ್ಸನ್ನು ಒಳಗೊಂಡ ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಇಂದು ಕನ್ನಡ ಸಂಘಟನೆಗಳ ಒಕ್ಕೂಟ ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಈ ಬಂದ್ ಗೆ ಸುಮಾರು ೪೦೦ಕ್ಕೂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಬೆಂಗಳೂರು ನಗರದ ಟೌನ್ ಹಾಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ನಿರಾಕರಿಸಿದ್ದಾರೆ. ಹೀಗಾಗಿ ಕನ್ನಡ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸುತ್ತಿವೆ.
ಹುಬ್ಬಳ್ಳಿ: ಸಂಗ್ರಾಮ ಸೇನೆ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆ ಕಾರ್ಯಕರ್ತರು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ರು. ಅಂಗಡಿಗಳನ್ನು ಬಂದ್ ಮಾಡಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ರು.
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಂದ್ ಗೆ ಖುದ್ದು ಶಿವಮೊಗ್ಗ ಕನ್ನಡ ಸಂಘಟನೆಗಳೇ ಬೆಂಬಲ ಸೂಚಿಸಿಲ್ಲ. ಹೀಗಾಗಿ ಜನಜೀವನ ಎಂದಿನಂತೆ ಸರಳವಾಗಿ ನಡೆದಿದೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಂದ್ ಸಾಂಕೇತಿಕ ಪ್ರತಿಭಟನೆಗೆ ಸೀಮಿತವಾಗಿದೆ. ಯಾರಿಗೂ ಬಂದ್ ಬಿಸಿ ತಟ್ಟಿಲ್ಲ. ಎಂದಿ ನಂತೆ ವಾಹನ ಸಂಚಾರ, ಅಂಗಡಿ ಮುಂಗಟ್ಟುಗಳು ಕಾರ್ಯ ನಿರ್ವಹಿಸುತ್ತಿವೆ.
ತುಮಕೂರು: ಸರೋಜಿನಿ ಮಹಿಷಿ ವರದಿ ಆಗ್ರಹಿಸಿ ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಗೆ ತುಮಕೂರಲ್ಲಿ ಬೆಂಬಲ ಸಿಕ್ಕಿಲ್ಲ. ಬಂದ್ ಗೆ ಸ್ಥಳೀಯ ಯಾವುದೇ ಸಂಘಟನೆಗಳು ಬೆಂಬಲ ಸೂಚಿಸಿಲ್ಲ.
ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲೂ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲ್ಲಾ ಆಟೋ, ಲಾರಿ ಬಸ್ ಗಳು ಎಂದಿ ನಂತೆ ರಸ್ತೆಗಿಳಿದಿದ್ದು. ಶಾಲಾ ಕಾಲೇಜುಗಳು ಓಪನ್ ಆಗಿವೆ.
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲೂ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತಿದೆ.
ಚಿಕ್ಕೋಡಿ: ಚಿಕ್ಕೋಡಿಯಲ್ಲೂ ಇಂದಿನ ಬಂದ್ ಜನಜೀವನದ ಮೇಲೆಯೂ ಯಾವುದೇ ಪರಿಣಾಮ ಬೀರಿಲ್ಲ. ಕೆಲ ಕನ್ನಡಪರ ಸಂಘಟನೆಗಳು ಸಾಂಕೇತಿಕ ಪ್ರತಿಭಟನೆ ನಡೆಸಿವೆ.
ವಿಜಯಪುರ: ವಿಜಯಪುರದಲ್ಲೂ ಕರ್ನಾಟಕ ಬಂದ್ ಬಿಸಿ ತಟ್ಟಿಲ್ಲ. ತರಕಾರಿ ಮಾರುಕಟ್ಟೆ, ಅಂಗಡಿ ಮುಂಗಟ್ಟುಗಳು ಎಂದಿನಂತೆ ವ್ಯಾಪಾರ ನಡೆಸುತ್ತಿವೆ. ಶಾಲಾ ಕಾಲೇಜುಗಳಿಗೆ ವಿದ್ಯಾರ್ಥಿಗಳು ತೆರಳಿದ್ದಾರೆ.
ದಾವಣಗೆರೆ: ಕರ್ನಾಟಕ ಬಂದ್ ಗೆ ದಾವಣಗೆರೆಯಲ್ಲಿ ಬೆಂಬಲ ಸಿಕ್ಕಿಲ್ಲ. ಶಾಲಾ-ಕಾಲೇಜುಗಳು, ಬಸ್ ಸಂಚಾರ, ಜನಜೀವನ ಎಂದಿನAತೆ ಇದ್ದು, ಕನ್ನಡಪರ ಸಂಘಟನೆಗಳ ಒಕ್ಕೂಟ ಸಾಂಕೇತಿಕವಾಗಿ ಜಿಲ್ಲೆಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.








