ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ಆಫ್ಲೈನ್/ಆನ್ಲೈನ್ ನಲ್ಲಿ ಲಿಂಕ್ ಮಾಡುವ ವಿಧಾನ
ಪಾನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡುವ ಕೊನೆಯ ದಿನಾಂಕವನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. CBDT (ಕೇಂದ್ರೀಯ ನೇರ ತೆರಿಗೆಗಳ ಮಂಡಳಿ) ಈ ಕುರಿತು ಅಧಿಸೂಚನೆಯನ್ನು ಹೊರಡಿಸಿದ್ದು, ಪ್ಯಾನ್ ಅನ್ನು ಆಧಾರ್ ಲಿಂಕ್ ಮಾಡುವ ಗಡುವನ್ನು ಸೆಪ್ಟೆಂಬರ್ 30, 2021 ರಿಂದ
ಮಾರ್ಚ್ 31, 2022 ರವರೆಗೆ ವಿಸ್ತರಿಸಲಾಗಿದೆ.
ಕೊರೋನಾ ಸಾಂಕ್ರಾಮಿಕ ನಂತರ ಉದ್ಭವಿಸಿದ ಕಠಿಣ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವ ಗಡುವನ್ನು ವಿಸ್ತರಿಸಲಾಗುತ್ತಿದೆ ಎಂದು ಸಿಬಿಡಿಟಿ ಹೇಳಿದೆ.

ಆನ್ಲೈನ್ ನಲ್ಲಿ ಪಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಹೇಗೆ
ಹಂತ 1. ಆಧಾರ್ ಕಾರ್ಡ್ನೊಂದಿಗೆ ಪಾನ್ ಕಾರ್ಡ್ ಅನ್ನು ಲಿಂಕ್ ಮಾಡಲು ಮೊದಲು ಆದಾಯ ತೆರಿಗೆ ಇ-ಫೈಲಿಂಗ್ ವೆಬ್ಸೈಟ್ಗೆ ಹೋಗಬೇಕು.
https://www1.incometaxindiaefiling.gov.in/home ಕ್ಲಿಕ್ ಮಾಡಿ.
ಹಂತ 2. ನೀವು ಎಡಭಾಗದಲ್ಲಿ ಲಿಂಕ್ ಆಧಾರ್ ಆಯ್ಕೆಯನ್ನು ಕಾಣುತ್ತಿರಿ. ಈ ಲಿಂಕ್ ಅನ್ನು ಕ್ಲಿಕ್ ಮಾಡಿದಾಗ ಹೊಸ ಪುಟ ತೆರೆಯುತ್ತದೆ. ಅಲ್ಲಿ ಲಿಂಕ್ ಆಧಾರ್ ಆಯ್ಕೆಯಿರುತ್ತದೆ.
ಹಂತ 3. ಈಗ ವಿವರಗಳನ್ನು ಭರ್ತಿ ಮಾಡುವ ಆಯ್ಕೆ ನಿಮ್ಮ ಮುಂದೆ ತೆರೆಯುತ್ತದೆ, ಅದರಲ್ಲಿ ನಿಮ್ಮ ಎಲ್ಲ ವಿವರಗಳನ್ನು ಭರ್ತಿ ಮಾಡಿ.
ಹಂತ 4. ಈ ಆಯ್ಕೆಗಳಲ್ಲಿ, ಪಾನ್ ಸಂಖ್ಯೆ, ಆಧಾರ್ ಸಂಖ್ಯೆ, ಅದನ್ನು ತುಂಬಲು ಒಂದು ಆಯ್ಕೆ ಇರುತ್ತದೆ.
ಹಂತ 5. ಎಲ್ಲಾ ವಿವರಗಳನ್ನು ಭರ್ತಿ ಮಾಡಿದ ನಂತರ ಕ್ಯಾಪ್ಚಾ ಕೋಡ್ ನಮೂದಿಸಿ.
ಹಂತ 6. ಈಗ ಲಿಂಕ್ ಆಧಾರ್ ಮೇಲೆ ಕ್ಲಿಕ್ ಮಾಡಿ.
ಹಂತ 7. ಇದನ್ನು ಮಾಡುವುದರಿಂದ ನಿಮ್ಮ ಪಾನ್ ಕಾರ್ಡ್ ಅನ್ನು ಆಧಾರ್ ಕಾರ್ಡ್ನೊಂದಿಗೆ ಲಿಂಕ್ ಮಾಡಲಾಗುತ್ತದೆ.
ಆಫ್ಲೈನ್ ನಲ್ಲಿ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡುವುದು ಹೇಗೆ
SMS ಮೂಲಕ ಕೂಡ ನೀವು ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡಬಹುದು. ನಿಮ್ಮ ಪ್ಯಾನ್ ಕಾರ್ಡ್ ಅನ್ನು ಆಧಾರ್ ನೊಂದಿಗೆ ಎಸ್ ಎಂಎಸ್ ಮೂಲಕ ಲಿಂಕ್ ಮಾಡಲು, ನೀವು ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯಿಂದ ಯುಐಡಿಪ್ಯಾನ್ <ಆಧಾರ್ ಸಂಖ್ಯೆ> <ಪ್ಯಾನ್ ಸಂಖ್ಯೆ> ಎಂದು ಟೈಪ್ ಮಾಡಿ, 567678 ಅಥವಾ 561561 ಗೆ SMS ಮಾಡಿ. ಸ್ವಲ್ಪ ಸಮಯದ ನಂತರ ಪ್ಯಾನ್ ಅನ್ನು ಆಧಾರ್ನೊಂದಿಗೆ ಲಿಂಕ್ ಮಾಡಿರುವ ಸಂದೇಶ ಬರುತ್ತದೆ.

ಎಚ್ಚರಿಕೆ – ದೇಶದಲ್ಲಿ ಕೊರೋನಾ ಸೋಂಕಿನ ಹಾವಳಿ ಕಡಿಮೆಯಾಗಿದ್ದರೂ ಸಂಪೂರ್ಣವಾಗಿ ನಿಂತಿಲ್ಲ. ಆದ್ದರಿಂದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಮತ್ತು ಕೊರೋನಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿ. ಜೊತೆಗೆ ವ್ಯಾಕ್ಸಿನೇಷನ್ ಪಡೆಯುವುದನ್ನು ಮರೆಯದಿರಿ. ಇದು ಸಾಕ್ಷಾಟಿವಿ ಕಳಕಳಿ.
https://twitter.com/SaakshaTv/status/1438338586689032194?s=19
https://twitter.com/SaakshaTv/status/1438322463549632518?s=19
https://twitter.com/SaakshaTv/status/1438663575405404164?s=19
https://twitter.com/SaakshaTv/status/1437937340652130312?s=19
#Aadhaar #PANcard








