ಹುಬ್ಬಳ್ಳಿ : ಕೋವಿಡ್ ನಡುವೆ ಮತ್ತೊಂದು ಆತಂಕ – ಜಿಲ್ಲೆಯಲ್ಲಿ 12 ಜನರಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ
ಹುಬ್ಬಳ್ಳಿ: ದೇಶ ಹಾಗೂ ರಾಜ್ಯದಲ್ಲಿ ಕೋವಿಡ್ 2ನೇ ಅಲೆ ಭೀತಿಗೆ ಜನ ನಲುಗಿಹೋಗಿದ್ದಾರೆ. ಈ ನಡುವೆ ದೇಶ ಹಾಗೂ ರಾಜ್ಯದಲ್ಲಿ ಬೆಂಗಳೂರು ಕೋಲಾರ ಹುಬ್ಬಳ್ಳಿ ಸೇರಿ ನಾನಾ ಬಾಗಗಳಿಗೆ ಮತ್ತೊಂದು ಹೊಸ ವೈರಸ್ ಬ್ಲಾಕ್ ಫಂಗಸ್ ಲಗ್ಗೆ ಇಟ್ಟಿದ್ದು, ಅನೇಕರನ್ನ ಬಲಿಪಡೆದುಕೊಂಡಿದೆ.
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕೋವಿಡ್ ಗುಣಮುಖರಾದರಲ್ಲಿ ಬ್ಲ್ಯಾಕ್ ಫಂಗಸ್ ಕಂಡುಬಮದಿದೆ.. ಒಟ್ಟು 12 ಜನರಲ್ಲಿ ಈ ವೈರಸ್ ಪತ್ತೆಯಾಗಿದೆ. ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ನಾಲ್ವರು ಗುಣಮುಖರಾಗಿದ್ದಾರೆ. ಔಷಧ ಕೊರತೆ ನಿಭಾಯಿಸುವ ನಿಟ್ಟಿನಲ್ಲಿ ವೈದ್ಯರು ಬೇರೆ ರೀತಿಯಲ್ಲಿ ಚಿಕಿತ್ಸೆ ಮುಂದುವರೆಸಿದ್ದಾರೆ. ಸೋಂಕಿತರಿಗೆ ಯಾವುದೇ ತೊಂದರೆಯಿಲ್ಲ ಎಂದು ಕಿಮ್ಸ್ ನಿರ್ದೇಶಕರು ತಿಳಿಸಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.