ಹುಬ್ಬಳ್ಳಿಯ ಉಣಕಲ್ ಹತ್ತಿರದ ಸಾಯಿ ನಗರದಲ್ಲಿ ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ಮತ್ತಿಬ್ಬರು ಅಯ್ಯಪ್ಪ ಭಕ್ತರು ತೇಜಶ್ವರ ಸಾತರೆ (26) ಮತ್ತು ಪ್ರಕಾಶ ಬಾರಕೇರ (41) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 8ಕ್ಕೇರಿದೆ.
ಸ್ಫೋಟದಲ್ಲಿ ಒಟ್ಟು 9 ಮಂದಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಗಾಯಗೊಂಡಿದ್ದರು. ಎಲ್ಲರಿಗೂ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಓರ್ವ ಬಾಲಕ ಮಾತ್ರ ಚೇತರಿಕೆ ಕಂಡಿದ್ದಾನೆ ಎಂದು ತಿಳಿದುಬಂದಿದೆ.