Hubballi: ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೃಹತ್ ಪಂಜಿನ ಮೆರವಣಿಗೆ…..
ಪರಿಶಿಷ್ಟ ಜಾತಿಗಳಲ್ಲಿ ಜನಸಂಖ್ಯೆಯನ್ನು ಆಧರಿಸಿ ಒಳಮೀಸಲಾತಿ ಜಾರಿ ಮಾಡುವಲ್ಲಿ ಸರಕಾರದ ವಿಳಂಬಕ್ಕೆ ಆಕ್ರೋಶ ವ್ಯಕ್ತಪಡಿಸಿ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಬೃಹತ್ ಪಂಜಿನ ಮೆರವಣಿಗೆ ಮಾಡಲಾಯಿತು.
ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ಯಥಾವತ್ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯ ಪರಿಶಿಷ್ಟ ಪಂಚಮ ಕುಲಬಾಂಧವರ ಒಕ್ಕೂಟದ ವತಿಯಿಂದ ಬೃಹತ್ ಪಂಜಿನ ಮೆರವಣಿಗೆ ನಡೆಸಿ ಹೋರಾಟಗಾರರು ಸರ್ಕಾರಕ್ಕೆ ಎಚ್ಚರಿಕೆ ನಡೆಸಿದ್ದಾರೆ.
ನೂರಾರು ಹೋರಾಟಗಾರರು ಕೈಯಲ್ಲಿ ಉರಿಯುತ್ತಿರುವ ಪಂಜನ್ನ ಹಿಡಿದು ಹಲಗೆ ವಾದನದ ತಾಳದೊಂದಿಗೆ ಅತ್ಯಂತ ಶಿಸ್ತಿನಿಂದ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ದುರ್ಗದ ಬೈಲನಿಂದ ಮೆರವಣಿಗೆ ಪ್ರಾರಂಭಗೊಂಡು ಹುಬ್ಬಳ್ಳಿ ತಹಶೀಲ್ದಾರ ಕಛೇರಿಯ ಮುಂದೆ ಕಳೆದ 58 ದಿನಗಳಿಂದ ನಡೆಯುತ್ತಿರುವ ಧರಣಿ ನಡೆಸಲಾಯಿತು. ವೇದಿಕೆಗೆ ಆಗಮಿಸಿ ತಹಶೀಲ್ದಾರರ ಮೂಲಕ ಮುಖ್ಯಮತ್ರಿಗಳಿಗೆ ಮನವಿ ಮಾಡಲಾಯಿತು.
Hubballi: Massive flag march demanding implementation of Sadashiva commission report