Hubli Crisis: ಮೌಲ್ವಿ ಮೌಲಾನಾ ವಾಸೀಂ ಪಠಾಣ್ ಅರೇಸ್ಟ್

1 min read
Hubli Saaksha Tv

ಮೌಲ್ವಿ ಮೌಲಾನಾ ವಾಸೀಂ ಪಠಾಣ್ ಅರೇಸ್ಟ್

ಹುಬ್ಬಳ್ಳಿ: ಏಪ್ರಿಲ್ 16 ರಂದು ಹುಬ್ಬಳ್ಳಿಯಲ್ಲಿ ನಡೆದ ಗಲಭೆಯ ಪ್ರಕರಣದ ಆರೋಪಿ ಮೌಲ್ವಿ ಮೌಲಾನಾ ವಾಸೀಂ ಪಠಾಣ್​ ನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿದ ಪೊಲೀಸರು, ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣೆಗೆ ತಂದು ಠಾಣೆಗೆ ಕರೆತಂದು ವಿಚಾರಣೆ ಆರಂಭಿಸಿದ್ದಾರೆ. ಆರೋಪಿ ವಾಸೀಂ ಪಠಾಣ್  ಮೇಲೆ ಶನಿವಾರ ರಾತ್ರಿ ಗಲಭೆ ವೇಳೆಯಲ್ಲಿ ಪೊಲೀಸ್ ಜೀಪ್ ಹತ್ತಿ ಸಮುದಾಯದ ಯುವಕರಿಗೆ ಪ್ರಚೋದನೆ ನೀಡಿರುವ ಗಂಭೀರ ಆರೋಪವಿದೆ.ಅಲ್ಲದೇ ಗಲಭೆ ಬಳಿಕ ಇವರು ನಾಪತ್ತೆಯಾಗಿದ್ದನು.

ಆದರೆ ಇಂದು ವಿಡಿಯೋ‌ವೊಂದನ್ನು ಬಿಡುಗಡೆ ಮಾಡಿ ಮಾತನಾಡಿ, ಘಟನೆಗೆ ನಾನು ಕಾರಣನಲ್ಲ. ನನ್ನ ಮೇಲೆ ವ್ಯವಸ್ಥಿತ ಪಿತೂರಿ ನಡೆದಿದೆ. ಘಟನೆಗೆ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಹುಬ್ಬಳ್ಳಿಯ ವಾತಾವರಣ ಹದಗೆಡಿಸುವ ಉದ್ದೇಶ ನನ್ನದಾಗಿರಲಿಲ್ಲ. ಸಾಮಾಜಿಕ ಜಾಲತಾಣದಲ್ಲಿ ನನ್ನ ವಿರುದ್ಧ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾಗಿದೆ ಎಂದಿದ್ದರು.‌

ನಮ್ಮ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಕುರಿತು ದೂರು ನೀಡಲು ಹಲವಾರು ಯುವಕರು ಅಲ್ಲಿ ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ನನ್ನನ್ನು ಕರೆಸಿದ್ದರು. ಪೊಲೀಸರ ಜೊತೆಗೆ ಮಾತನಾಡಿದೆ. ಪೊಲೀಸರು ಸಹಕಾರ ಕೊಟ್ಟಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆಯೇ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ. ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಶಾಂತಿ ಕಾಪಾಡಲು ಹೇಳಿದೆ ಎಂದು ಇಂದು ಬಿಡುಗಡೆ ಮಾಡಿದ ವಿಡಿಯೋದಲ್ಲಿ ಹೇಳಿದ್ದಾರೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd