130 ಕೋಟಿಗೆ ಖಾಸಗಿ ತೆಕ್ಕೆಗೆ ಸೇರಲಿದೆ ಹುಬ್ಬಳ್ಳಿ ಏರ್ ಪೋರ್ಟ್ Hubli saaksha tv
ಹುಬ್ಬಳ್ಳಿ : ಸುಮಾರು 150 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಅಂತಾರಾಷ್ಟ್ರೀಯ ಮಟ್ಟದ ನಿಲ್ದಾಣವನ್ನಾಗಿ ಅಭಿವೃದ್ಧಿ ಪಡಿಸಲಾಗಿರುವ ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು 130ಕೋಟಿ ರೂಪಾಯಿಗೆ ಕೇಂದ್ರ ಸರ್ಕಾರ ಖಾಸಗಿಗೆ ವಹಿಸಲು ಮುಂದಾಗಿದೆ.
ಮೂಲಸೌಕರ್ಯ ಕ್ಷೇತ್ರಕ್ಕೆ ಆರ್ಥಿಕ ಸಂಪನ್ಮೂಲ ಹೊಂದಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ನ್ಯಾಷನಲ್ ಮಾನಿಟೈಸೇಶನ್ ಪೈಪ್ ಲೈನ್ ಎನ್‍ಎಂಪಿರಾಷ್ಟ್ರೀಯ ನಗದೀಕರಣ ಯೋಜನೆ ಯೋಜನೆಯಡಿ ಖಾಸಗಿಗೆ ವಹಿಸಿಕೊಡಲು ಹುಬ್ಬಳ್ಳಿ ಅಂತಾರಾಷ್ಟ್ರೀಯ ಮಟ್ಟದ ವಿಮಾನ ನಿಲ್ದಾಣವನ್ನು ಗುರುತಿಸಲಾಗಿದೆ.
ಕೇಂದ್ರ ಸರ್ಕಾರ ದೇಶದ 25 ನಿಲ್ದಾಣಗಳನ್ನು ಎನ್‍ಎಂಪಿ ಯೋಜನೆಗೊಳಪಡಿಸಿದೆ. ಈ ಪೈಕಿ ರಾಜ್ಯದ ಹುಬ್ಬಳ್ಳಿ ವಿಮಾನ ನಿಲ್ದಾಣ ಖಾಸಗಿ ನಿರ್ವಹಣೆಗೆ ಆಯ್ಕೆ ಮಾಡಲಾಗಿದೆ. ಈ 25 ನಿಲ್ದಾಣಗಳಿಂದ 20,782 ಕೋಟಿ ರೂ.ಗಳನ್ನು ಸಂಗ್ರಹಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ.