Hubballi | ಹುಬ್ಬಳ್ಳಿಯಲ್ಲಿ ರೌಡಿ ಶೀಟರ್ ಗಳ ಪರೇಡ್
ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ದಿನೇ ದಿನೇ ಅಪರಾಧ ಚಟುವಟಿಕೆಗಳ ಹೆಚ್ಚಳ ಹಿನ್ನೆಲೆಯಲ್ಲಿ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಗಳ ಪರೇಡ್ ಮಾಡಲಾಯಿತು.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆ ಸೇರಿ ಹುಬ್ಬಳ್ಳಿಯ ಬಹುತೇಕ ಪೊಲೀಸ್ ಠಾಣೆಗಳಲ್ಲಿ ಸುಮಾರು 200ಕ್ಕೂ ಹೆಚ್ಚು ರೌಡಿಗಳ ಪರೇಡ್ ನಡೆಸಲಾಗಿದೆ.

ಅಲ್ಲದೆ ರೌಡಿ ಶೀಟರ್ ಗಳ ಮನೆಗಳಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.
ಪರೇಡ್ ವೇಳೆ ಡಿಸಿಪಿ ಸಾಹಿಲ್ ಬಾಗ್ಲಾ ರೌಡಿಗಳಿಗೆ ವಾರ್ನ್ ಮಾಡಿದ್ದಾರೆ.
ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾದರೆ ಕೋಕಾ ಮತ್ತಿತರ ಕಾಯ್ದೆ ಪ್ರಯೋಗ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.








