ಬಿಗಿ ಪೊಲೀಸ್ ಬಂದೋಬಸ್ತನಲ್ಲಿ 2nd Puc ಪರೀಕ್ಷೆ ಬರೆಯಲಿರುವ ಅಭಿಷೇಕ ಹಿರೇಮಠ
ಹುಬ್ಬಳ್ಳಿ: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಪ್ರಾರಂಭವಾಗಲಿದ್ದು, ವಿವಾದಿತ ವಿಡಿಯೋ ಪೋಸ್ಟ್ ಮಾಡಿದ್ದ ಆರೋಪಿ ಅಭಿಷೇಕ ಹಿರೇಮಠ ನಗರದ ಮಹೇಶ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಆರೋಪಿ ಅಭಿಷೇಕ ಹಿರೇಮಠ್ ಪೊಲೀಸ್ ಬಿಗಿ ಭದ್ರತೆಯಲ್ಲಿ ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದು, ಈ ಸಂಭಂದ ಮಹೇಶ್ ಪಿಯು ಕಾಲೇಜಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ ಕೈಗೊಳ್ಳಲಾಗಿದೆ. ಅಭಿಷೇಕ ಹಿರೇಮಠ್ಗೆ ಪರೀಕ್ಷೆ ಬರೆಯಲು ಕೋರ್ಟ್ ಅನುಮತಿ ನೀಡಿದೆ.
ಮಹೇಶ್ ಪಿಯು ಕಾಲೇಜಿನಲ್ಲಿ ಪರೀಕ್ಷೆ ಬರೆಯಲಿರುವ ಅಭಿಷೇಕ್, ಇಂದು ಬ್ಯುಜಿನೆಸ್ ಸ್ಟಡೀಸ್ ವಿಷಯದ ಪರೀಕ್ಷೆಗೆ 10:15ಕ್ಕೆ ಪರೀಕ್ಷಾ ಕೇಂದ್ರಕ್ಕೆ ಆಗಮಿಸಲಿದ್ದಾರೆ ಎಂದು ತಿಳಿದು ಬಂದಿದೆ. ಹುಬ್ಬಳ್ಳಿಯ ಕಾರಾಗೃಹದಿಂದ ಪೊಲೀಸ್ ಭದ್ರತೆಯಲ್ಲಿ ಪರೀಕ್ಷೆ ಬರೆಯಲು ಆಗಮಿಸಲಿದ್ದು, ಪರೀಕ್ಷೆ ಬರೆದ ಬಳಿಕ ಮತ್ತೆ ಪೊಲೀಸ್ ಭದ್ರತೆಯಲ್ಲಿ ಜೈಲಿಗೆ ರವಾನಿಸಲಿದ್ದಾರೆ.
ಪರೀಕ್ಷೆ ಮುಗಿಯುವವರೆಗೂ ಇದೇ ರೀತಿ ನಡೆದುಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದೆ. ಅಭಿಷೇಕ್ ಪರ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ ಪರೀಕ್ಷೆ ಬರೆಯಲು ಅನುವು ಮಾಡಿಕೊಟ್ಟಿದೆ.