ಕೊಪ್ಪಳ: ಹನುಮಂತನ ಜನ್ಮಸ್ಥಳ ಅಂಜನಾದ್ರಿ ಬೆಟ್ಟಕ್ಕೆ ತೆರಳುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಆಂಜನೇಯ ಸ್ವಾಮಿ ದೇವಸ್ಥಾನ ಹುಂಡಿಯಲ್ಲಿ ಭರ್ಜರಿ ಕಾಣಿಕೆ ಭಕ್ತರಿಂದ ಬಂದಿದೆ.
ಈ ಕಾಣಿಕೆ ಹುಂಡಿಯಲ್ಲಿನ ಹಣವನ್ನು ಗಂಗಾವತಿ ತಾಲೂಕು ಆಡಳಿತದ ವತಿಯಿಂದ ಎಣಿಕೆ ಮಾಡಲಾಯಿತು. ತಹಸೀಲ್ದಾರ್ ವಿಶ್ವನಾಥ್ ಮುರಡಿ ನೇತೃತ್ವದಲ್ಲಿ ಹುಂಡಿ ಹಣ ಎಣಿಕೆ ಮಾಡಲಾಗಿದ್ದು, 22 ದಿನಗಳ ಅವಧಿಗೆ ಹುಂಡಿಯಲ್ಲಿ ಒಟ್ಟು 27,27,761 ರೂಪಾಯಿಗಳು ಸಂಗ್ರಹವಾಗಿವೆ.
ಅಲ್ಲದೇ, ಈ ಹುಂಡಿಯಲ್ಲಿ ನೇಪಾಳ ದೇಶದ ಎರಡು ವಿದೇಶಿ ನೋಟುಗಳು, 3 ವಿದೇಶಿ ನಾಣ್ಯಗಳು ದೊರೆತಿವೆ ಎನ್ನಲಾಗಿದೆ.








