ಅಹಮದಾಬಾದ್: ಹೈದರಾಬಾದ್ ವಿರುದ್ಧ ಗುಜರಾತ್ ತಂಡ ಭರ್ಜರಿ ಜಯ ಸಾಧಿಸಿದೆ.
ಡೇವಿಡ್ ಮಿಲ್ಲರ್, ಸಾಯಿ ಸುದರ್ಶನ್ ಹಾಗೂ ಶುಭಮನ್ ಗಿಲ್ ಸಂಘಟಿತ ಬ್ಯಾಟಿಂಗ್ ಹಾಗೂ ಮೋಹಿತ್ ಶರ್ಮಾ ಬೌಲಿಂಗ್ ದಾಳಿಯಿಂದಾಗಿ ಗುಜರಾತ್ ಟೈಟಾನ್ಸ್ ಗೆಲುವಿನ ದಡ ಸೇರಿದೆ. ಟೈಟಾನ್ಸ್ ತಂಡವು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ ರೈಸರ್ಸ್ ಹೈದರಾಬಾದ್ ತಂಡ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿತ್ತು. 163 ರನ್ಗಳ ಗುರಿ ಬೆನ್ನತ್ತಿದ ಟೈಟಾನ್ಸ್ ಪಡೆ 19.1 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 168 ರನ್ ಗಳಿಸುವ ಮೂಲಕ ಗುರಿ ತಲುಪಿತು. ಸ್ಫೋಟಕ ಬ್ಯಾಟರ್ ಡೇವಿಡ್ ಮಿಲ್ಲರ್ ಕೊನೇ ಓವರ್ ಮೊದಲ ಎಸೆತದಲ್ಲೇ ಅದ್ಧೂರಿ ಸಿಕ್ಸರ್ ಬಾರಿಸುವ ಮೂಲಕ ಗೆಲುವಿನ ನಗೆ ಬೀರುವಂತೆ ಮಾಡಿದರು.