ಉಡುಪಿ : ನಾಡ ಕಾಡುವ ಹುಲಿಯನ್ನು, ಕಾಡಿಗಟ್ಟದೆ ಬಿಡೆವು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಕಿಡಿಕಾರಿದ್ದಾರೆ.
‘ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು.
ಇದನ್ನೂ ಓದಿ : ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸೋ ಧಮ್ ನಿಮಗಿದೆಯೇ ಕಟೀಲ್ ಅವರೇ : ಸಿದ್ದರಾಮಯ್ಯ
ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟ್ವಿಟ್ಟರ್ ನಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಅವರು ತಿರುಗೇಟು ನೀಡಿದ್ದಾರೆ.
ಕೋಟಾ ಶ್ರೀನಿವಾಸ ಪೂಜಾರಿ ಟ್ವೀಟ್ ನಲ್ಲಿ.. `ನಳಿನ್ ಕುಮಾರ್, ಕಾರ್ಯಕರ್ತರ ಸಂತೋಷಕ್ಕೆ ರಾಜ್ಯಾಧ್ಯಕ್ಷರಾಗಿದ್ದಾರೆ. ಬಂಡೆ ಒಡೆಯುವುದು, ಟಗರಿಗೆ ಡಿಕ್ಕಿ ಹೊಡೆಯುವುದು, ಸಾಂದರ್ಭಿಕ ಮಾತು. ನೆನಪಿರಲಿ, ಕಳೆದ ಉಪಚುನಾವಣೆಯಲ್ಲಿ 15ರಲ್ಲಿ 12ಕ್ಷೇತ್ರ ಗೆದ್ದಿದ್ದು, ಮುಂದೆ ಶಿರಾ, ಆರ್.ಆರ್ ನಗರ ಗೆಲ್ಲುವುದು, ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲೆ. ನಾಡ ಕಾಡುವ ಹುಲಿಯನ್ನು, ಕಾಡಿಗಟ್ಟದೆ ಬಿಡೆವು ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಏಳೇಳು ಜನ್ಮದಲ್ಲೂ ಡಿಕೆಶಿಯವ್ರಿಗೆ ನಾನು ಸರಿಸಾಟಿ ಅಲ್ಲ : ಮುನಿರತ್ನ
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










