ಮುಂಬೈ, ಜೂನ್ 3 : ಭೀಕರ ನಿಸರ್ಗ ಚಂಡಮಾರುತ ಕೊರೊನಾ ಸೋಂಕಿನಿಂದ ತತ್ತರಿಸಿರುವ ಮಹಾರಾಷ್ಟ್ರದ ಕರಾವಳಿಗೆ ಬಂದು ಅಪ್ಪಳಿಸಿದೆ. ಭಾರತೀಯ ಹವಾಮಾನ ಇಲಾಖೆ ಈ ಕುರಿತು ಮಾಹಿತಿ ನೀಡಿದ್ದು, ನಿಸರ್ಗ ಚಂಡಮಾರುತ ಅಧಿಕೃತವಾಗಿ ಮಹಾರಾಷ್ಟ್ರ ಕರಾವಳಿಗೆ ಬಂದು ಅಪ್ಪಳಿಸಿದೆ ಎಂದು ತಿಳಿಸಿದೆ.
ಈಗಾಗಲೇ ಮಹಾರಾಷ್ಟ್ರದಲ್ಲಿ ಭಾರೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಜೋರಾಗಿ ಮಳೆ ಸುರಿಯುತ್ತಿದೆ. ಮುಂಬೈ ನಗರದಾದ್ಯಂತ ಅತ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಯಾರೂ ಮನೆಯಿಂದ ಹೊರ ಬರದಂತೆ ಆದೇಶ ಹೊರಡಿಸಲಾಗಿದೆ. ಅಲ್ಲದೇ ಜನರಿಗೆ ಚಂಡಮಾರುತ ಅಪ್ಪಳಿಸಿದ ಸಂದರ್ಭದಲ್ಲಿ ಪಾಲಿಸಬೇಕಾದ ಮಾರ್ಗಸೂಚಿಗಳನ್ನು ಸರ್ಕಾರ ಬಿಡುಗಡೆ ಮಾಡಿದೆ. ಮುಂದಿನ ಮೂರು ಗಂಟೆಗಳ ಕಾಲ ಮಹಾರಾಷ್ಟ್ರ ಕರಾವಳಿಯಾದ್ಯಂತ ನಿಸರ್ಗ ಚಂಡಮಾರುತ ತನ್ನ ಪ್ರಭಾವ ಬೀರಲಿದೆ ಎಂದು ಹೇಳಲಾಗಿದೆ.








