ನವದೆಹಲಿ : ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಎದ್ದಿರುವ ಪರಿಣಾಮ ಕರ್ನಾಟಕ ಕರಾವಳಿ ತೀರದಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಗೃಹ ಸಚಿವಾಲಯದ ವಿಪತ್ತು ನಿರ್ವಹಣಾ ವಿಭಾಗ ತಿಳಿಸಿದೆ.
ಗೃಹ ಸಚಿವಾಲಯದ ವಿಪತ್ತು ನಿರ್ವಹಣಾ ವಿಭಾಗವು ಫಾಕ್ಸ್ ಮೂಲಕ ಕರ್ನಾಟಕ, ಕೇರಳ, ಲಕ್ಷದ್ವೀಪ, ಗೋವಾ, ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಸಂದೇಶ ಕಳುಹಿಸಿ ಕರಾವಳಿ ಭಾಗದಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಅಲ್ಲದೆ ಲಕ್ಷದ್ವೀಪ, ಕರ್ನಾಟಕ, ಕೇರಳದಲ್ಲಿ ಮೇ 31 ಮತ್ತು 1 ರಂದು ಭಾರೀ ಮಳೆಯಾದರೆ, ಮಹಾರಾಷ್ಟ್ರದಲ್ಲಿ ಜೂನ್ 2ರಿಂದ 4ರವರೆಗೆ ಮಳೆಯಾಗಲಿದೆ. ಗುಜರಾತಿನಲ್ಲಿ ಜೂನ್ 3 ರಿಂದ 5ರವರೆಗೆ ಮಳೆಯಾಗಲಿದೆ ಎಂದು ಹೇಳಿದೆ.
ಜೂನ್ 2ರ ವೇಳೆಗೆ ಕರ್ನಾಟಕದಲ್ಲಿ 90-100 ಕಿ.ಮೀ ವೇಗದಲ್ಲಿ ಗಾಳಿ ಬೀಸಬಹುದು ಎಂದು ತಿಳಿಸಿರುವ ಸಚಿವಾಲಯ ಮೀನುಗಾರರು ಸಮದ್ರಕ್ಕೆ ಇಳಿಯಬಾರದು. ಮೀನುಗಾರಿಕೆಗೆ ತೆರಳಿದ ಮೀನುಗಾರು ಇಂದೇ ಮರಳಿ ದಡ ಸೇರಬೇಕು ಎಂದು ಸೂಚಿಸಿದೆ.








