ಬೀದರ್ : ಅನೈತಿಕ ಸಂಬಂಧ ಪ್ರಶ್ನಿಸಿದ್ದಕ್ಕೆ ಪತ್ನಿಯೇ ಪತಿಯ ಕೊಲೆ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಪ್ರಶ್ನೆ ಮಾಡಿದ್ದ ಪತಿಯನ್ನೇ ಪ್ರಿಯಕರನೊಂದಿಗೆ ಸಂಚು ರೂಪಿಸಿ ಕೊಲೆ ಮಾಡಲಾಗಿದೆ. ಅಮಿತ್ ಎಂಬ ವ್ಯಕ್ತಿ ಕೊಲೆಯಾಗಿದ್ದು, ಪತ್ನಿ ಚೈತ್ರಾ, ಗೆಳೆಯ ರವಿ ಪಾಟೀಲ್ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ. ಅಲ್ಲದೇ, ಸಹಕಾರ ನೀಡಿರುವ ಹಿನ್ನೆಲೆಯಲ್ಲಿ ಪೊಲೀಸರು ಸಿಕ್ಕಿಂದರ್ ಶಾಹಾ, ವೆಂಕಟ್ ಗಿರಿಮಾತೆ ಮತ್ತು ಆಕಾಶ್ ರನ್ನು ಬಂಧಿಸಿದ್ದಾರೆ.
ನ. 11 ರಂದು ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದ ಹತ್ತಿರ ಅಮಿತ್ ಶವ ಪತ್ತೆಯಾಗಿತ್ತು. ಅಪಘಾತ ಎಂಬಂತೆ ಬಿಂಬಿಸಲಾಗಿತ್ತು. ಆದರೆ, ಮೃತದೇಹ ಕಂಡಾಗ ಪೊಲೀಸರಿಗೆ ಅನುಮಾನ ಬಂದಿತ್ತು. ತನಿಖೆ ಕೈಗೊಂಡಾಗ ಶವ ಪತ್ತೆಯಾದ ಜಾಗದಲ್ಲಿ ಸಕ್ರಿಯವಾಗಿದ್ದ ಮೊಬೈಲ್ ನಂಬರ್ ಪತ್ತೆ ಹಚ್ಚಿದ್ದಾರೆ. ನಂತರ ಆರೋಪಿಗಳನ್ನು ವಿಚಾರ ನಡೆಸಿದಾಗ ರವಿ ಪಾಟೀಲ್ ಮುಂಗಡವಾಗಿ ಹಣ ನೀಡಿ ಕೃತ್ಯ ಎಸಗುವಂತೆ ಹೇಳಿದ್ದನ್ನು ಬಾಯಿ ಬಿಟ್ಟಿದ್ದಾರೆ. ವಿಚಾರಣೆ ವೇಳೆ ನಮ್ಮ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಹತ್ಯೆ ಮಾಡಲಾಗಿದೆ ಎಂದು ಚೈತ್ರಾ ಹೇಳಿದ್ದಾರೆ.