ಅಕ್ರಮ ಸಂಬಂಧ ಶಂಕೆ : ಪತ್ನಿಯನ್ನ ಕೊಂದ ಪತಿ bangalore
ಬೆಂಗಳೂರು : ಅಕ್ರಮ ಸಂಬಂಧ ಶಂಕೆ ಪತ್ನಿಯನ್ನ ಪತಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಹುಳಿಮಾವು ಸಮೀಪದ ಅರಕೆರೆ ಬಿಟಿಎಸ್ ಲೇಔಟ್ ನಲ್ಲಿ ನಡೆದಿದೆ.
ಆಶಾ ಕೊಲೆಯಾದ ಮಹಿಳೆಯಾಗಿದ್ದು, ಮಣಿ ಕೊಲೆ ಆರೋಪಿಯಾಗಿದ್ದಾನೆ. ಆಶಾ ಹಾಗೂ ಮಣಿ ನಡುವೆ ಆಗಾಗ ಗಲಾಟೆಯಾಗುತ್ತಿತ್ತು.
ಅದೇ ರೀತಿ ನಿನ್ನೆ ರಾತ್ರಿಯೂ ಪತಿ, ಪತ್ನಿ ನಡುವೆ ಗಲಾಟೆಯಾಗಿದೆ.
ನಿನ್ನೆ ರಾತ್ರಿ ನಡೆದ ಜಗಳದ ಸಿಟ್ಟಿನಿಂದ ಪತ್ನಿ ಆಶಾ ಮಲಗಿದ್ದ ಸಮಯದಲ್ಲಿ ಇಂದು ಬೆಳಗಿನಜಾವ ಕೊಲೆ ಮಾಡಿ ಪರಾರಿಯಾಗಿದ್ದಾನೆ.
ಬೆಳಗ್ಗೆಯಾದರೂ ಆಶಾ ಮನೆಯಿಂದ ಹೊರಬಾರದ ಹಿನ್ನೆಲೆ ಪಕ್ಕದ ಮನೆಯವರು ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಕೂಡಲೇ ಸ್ಥಳೀಯರು ಹುಳಿಮಾವು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಾಗಿ ಬಲೆ ಬೀಸಿದ್ದಾರೆ.









