ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆಂಬ ಕಾರಣಕ್ಕೆ ಶಾಸಕ ಸಿ.ಟಿ. ರವಿ ಬಂಧನ ಮಾಡಿದಾಗ ದೊಡ್ಡ ಹೈಡ್ರಾಮಾವೇ ನಡೆಯಿತು.
ಮಹಿಳೆಯರಿಗೆ ಅಪಮಾನವಾಗುವಂತಹ ಬಳಸಿದ್ದಕ್ಕಾಗಿ ಅವರ ಎಫ್ಐಆರ್ ಕೂಡ ಆಗಿದೆ. ಪೊಲೀಸರು ಬಂಧಿಸಿ ರಾತ್ರಿಯಿಡೀ ಸುತ್ತಾಡಿಸಿದ್ದಾರೆ. ಸಿ.ಟಿ ರವಿ ಅವರ ಮೇಲೆ ಹಲ್ಲೆಯೂ ನಡೆದ್ದು, ತಲೆಗೆ ಗಾಯವಾಗಿದೆ. ಹಣೆಯಿಂದ ರಕ್ತ ಸೋರುತ್ತಿರುವ ದೃಶ್ಯಗಳು ಕಂಡು ಬಂದಿವೆ.
ಸಿ.ಟಿ ರವಿ ಅವರನ್ನ ಬೆಂಗಳೂರಿಗೆ ಕರೆತರುವ ವೇಳೆ ಖಾನಾಪುರ ಪೊಲೀಸ್ ಠಾಣೆ ಮುಂದೆ ಭಾರೀ ಹೈಡ್ರಾಮಾ ನಡೆದಿದೆ. ನನ್ನ ಕೊಲೆಗೆ ಸಂಚು ರೂಪಿಸಿದ್ದಾರೆಂದು ಸಿ.ಟಿ. ರವಿ ಕೂಡ ದೂರು ನೀಡಿದ್ದಾರೆ. ಇನ್ನೊಂದೆಡೆ ಬಂಧನ ಖಂಡಿಸಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದ್ದಾರೆ.
ಸಚಿವೆಗೆ ನಿಂದನೆ ಆರೋಪದಲ್ಲಿ ಬಂಧನವಾಗಿರುವ ಸಿ.ಟಿ ರವಿ ಅವರನ್ನು ಖಾನಾಪುರದಿಂದ ಕರೆತರುತ್ತಿರುವ ಪೊಲೀಸರು ಬೆಂಗಳೂರಿಗೆ ಕರೆ ತರುತ್ತಿದ್ದಾರೆ.