ಮಕ್ಕಳಿಗೆ ಸೋಂಕು ತಗಲಬಾರದೆಂದು ಆತ್ಮಹತ್ಯೆಗೆ ಶರಣಾದ ಪೋಷಕರು
ಹೈದರಾಬಾದ್ : ಕೊರೊನಾ ಹಾವಳಿಯಿಂದ ನಿತ್ಯ ಸಾವಿರಾರು ಜನ ಸಾಯುತ್ತಿದ್ದಾರೆ. ಈ ನಡುವೆ ಅನೇಕರು ಆತ್ಮಹತ್ಯೆಗೂ ಶರಣಾಗಿರುವ<ತಹ ಮಲಕುವ ಘಟನೆಗಳು ನಡೆಯುತ್ತಲೇ ಇವೆ.. ಜನರು ಸಣ್ಣ ನೆಗಡಿ ಜ್ವರ ಬಂದ್ರು ಪ್ಯಾನಿಕ್ ಆಗೋದಕ್ಕೆ ಶುರು ಮಾಡಿದ್ದಾರೆ.. ಇದೀಗ ಕೊರೊನಾ ಸೋಂಕಿತ ದಂಪತಿಯೊಂದು ತಮ್ಮ ಮಕ್ಕಳಿಗೂ ಸೋಂಕು ತಗುಲಬಹುದೆಂಬ ಭೀತಿಯಿಂದ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡಲ್ಲಿ ನಡೆದಿದೆ.
ಪ್ರಸಾದ್(40) ಮತ್ತು ಅವರ ಪತ್ನಿ ಭಾರತಿ(37) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಕೊರೊನಾ ಸೋಂಕಿನ ಪರೀಕ್ಷೆಯನ್ನು ಮಾಡಿಸಿದ್ದರು. ವರದಿ ಕೂಡ ಪಾಸಿಟಿವ್ ಬಂದಿತ್ತು. ಹೀಗಾಗಿ ಮಕ್ಕಳಿಗೆ ಸೋಂಕು ತಗುಲಿತ್ತೆ ಅನ್ನೋ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.