Siddaramaiah | ನಾನು ಕನ್ನಡದ ಕಾವಲುಗಾರ.. ಡೋಂಗಿ ಚೌಕಿದಾರ
ಬೆಂಗಳೂರು : ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ನಾನು ರಾಜಕೀಯ ಜೀವನ ಪ್ರಾರಂಭಿಸಿದವನು. ನಾನು ಇಂದು, ಮುಂದು, ಎಂದೆಂದೂ ಒಬ್ಬ ಕನ್ನಡದ ಕಾವಲುಗಾರ, ಕಳ್ಳರ ಜೊತೆ ಷಾಮೀಲಾಗುವ ಡೋಂಗಿ ಚೌಕಿದಾರ ಅಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಹಿಂದಿ ಭಾಷೆ ವಿಚಾರವಾಗಿ ಸರಣಿ ಟ್ವೀಟ್ ಗಳನ್ನು ಮಾಡಿರುವ ಸಿದ್ದರಾಮಯ್ಯ, ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ, ಅಪ್ಪಿಕೊಂಡ ಪಕ್ಷ. ಒಂದು ಧರ್ಮ, ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ.
ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ ಯಶಸ್ಸು ಕಾಣುವುದನ್ನು ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ.
12/12#HindiImposition— Siddaramaiah (@siddaramaiah) April 29, 2022
ಕನ್ನಡವನ್ನು ತುಳಿದು ಹಿಂದಿ ಹೇರಲು ಹೊರಟಿರುವ ಬಿಜೆಪಿ ನಾಯಕರ ಕುತಂತ್ರದ ರಾಜಕಾರಣವನ್ನು ಸ್ವಾಭಿಮಾನಿ ಕನ್ನಡಿಗರೆಲ್ಲರೂ ಒಕ್ಕೊರಲಿನಿಂದ ವಿರೋಧಿಸಬೇಕಾಗಿದೆ. ನಮ್ಮೆದುರಿಗೆ ಗೋಕಾಕ್ ಹೋರಾಟದ ಮಾದರಿ ಇದೆ ಎಂದು ಬರೆದುಕೊಂಡಿದ್ದಾರೆ.
ಕಾಂಗ್ರೆಸ್ ಬಹು ಧರ್ಮ, ಬಹುಭಾಷೆ, ಬಹು ಸಂಸ್ಕೃತಿಗಳನ್ನೊಳಗೊಂಡ ಬಹುತ್ವವನ್ನು ಒಪ್ಪಿಕೊಂಡ, ಅಪ್ಪಿಕೊಂಡ ಪಕ್ಷ.
ಒಂದು ಧರ್ಮ, ಒಂದು ಭಾಷೆ, ಒಂದು ಸಂಸ್ಕೃತಿಯನ್ನು ಹೇರುವುದು ಜನವಿರೋಧಿ ಮಾತ್ರವಲ್ಲ ಸಂವಿಧಾನ ವಿರೋಧಿ ಕೂಡಾ ಆಗಿದೆ.
10/12#HindiImposition— Siddaramaiah (@siddaramaiah) April 29, 2022
ಅಲ್ಲದೇ ನಮ್ಮ ಚಂದನವನದ ಕನ್ನಡ ಚಿತ್ರಗಳು, ಬಾಲಿವುಡ್ ಚಿತ್ರಗಳಿಗೆ ಸೆಡ್ಡು ಹೊಡೆದು ರಾಷ್ಟ್ರಮಟ್ಟದಲ್ಲಿ ಯಶಸ್ಸು ಕಾಣುವುದನ್ನು ಸಹಿಸದ ಹಿಂದಿ ಚಿತ್ರನಟರು ಕನ್ನಡದ ವಿರುದ್ಧ ನಂಜು ಕಾರುತ್ತಿದ್ದಾರೆ. ಕನ್ನಡ ಚಿತ್ರರಂಗ ಇದಕ್ಕೆ ಒಕ್ಕೊರಲಿನ ಉತ್ತರ ನೀಡಬೇಕಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
I am a Kannada watchman not Dongi Chowkidar









