ಬೆಂಗಳೂರು : ಬಿಜೆಪಿ ವಿಧಾನಪರಿಷತ್ ಟಿಕೆಟ್ ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಹೆಚ್ ವಿಶ್ವನಾಥ್ ಅವರನ್ನು ಕೈಬಿಡಲಾಗಿದೆ. ಈ ಕುರಿತು ಸುದ್ದಿಗಾರರೊಂದಿಗೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಸಿಎಂ ಮೇಲೆ ವಿಶ್ವಾಸ ಇದೆ ಎಂದಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, “ನಾನು ಬಿಜೆಪಿಗೆ ಹೊಸಬ, ನನಗೆ ಬಿಜೆಪಿಯ ಆಳ ಅಗಲ ಗೊತ್ತಿಲ್ಲ. ನನ್ನ ಜೊತೆಗೆ ಬಂದವರು ಎಲ್ಲರೂ ಈಜಿ ದಡ ಸೇರಿದ್ದಾರೆ. ನಾನು ಇನ್ನು ಸೇರಿಲ್ಲ. ನಾನು ಹಿಂದುಳಿದ ವರ್ಗದ ಹಿರಿಯ ನಾಯಕ. ಯಾಕೆ ಟಿಕೆಟ್ ತಪ್ಪಿಸಿದ್ದಾರೆ ಗೊತ್ತಿಲ್ಲ. ಇದರಿಂದ ನಾನು ಹತಾಷನಾಗಿಲ್ಲ. ನಮ್ಮ ನಾಯಕ ಯಡಿಯೂರಪ್ಪ. ನನ್ನ ತ್ಯಾಗಕ್ಕೆ ಪ್ರತಿಫಲ ಸಿಗುತ್ತೆ. ಈಗಲು ಯಡಿಯೂರಪ್ಪನವರ ಮೇಲೆ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರಾಜ್ಯ ನಾಯಕರು ನಾಲ್ಕು ಜನರ ಹೆಸರನ್ನು ಅಂತಿಮಗೊಳಿಸಿ ದೆಹಲಿಗೆ ಕಳುಹಿಸಿದ್ದರು. ಆದರೆ ಇದೀಗ ನನ್ನ ಹೆಸರನ್ನು ಕೈ ಬಿಡಲಾಗಿದೆ ಎಂದ ವಿಶ್ವನಾಥ್, ಇದರ ಹಿಂದೆ ಯಾರ ಕೈವಾಡವಿದೆ ಎಂದು ತಿಳಿದಿಲ್ಲ. ವೈಯಕ್ತಿಕವಾಗಿ ನನಗೆ ಬೇಸರವಿಲ್ಲ. ಆದರೆ ನನ್ನಂಥ ಒಬ್ಬ ಹಿರಿಯ ಹಿಂದುಳಿದ ನಾಯಕನಿಗೆ ಯಾಕೆ ಟಿಕೆಟ್ ತಪ್ಪಿತು ಎಂಬ ನೋವಿದೆ. ಈಗಾಗಲೇ ಹಲವು ನೋವುಗಳನ್ನು ನುಂಗಿಕೊಂಡು ಬಂದವನು. ಈಗ ಎಂಎಲ್ ಸಿ ಟಿಕೆಟ್ ಸಿಗಲಿಲ್ಲವೆಂದು ಹತಾಶನಾಗಿಲ್ಲ ಎಂದರು.
ಇನ್ನು ನನ್ನ ಧ್ವನಿ ಅಡಗಲಿಕ್ಕೆ ಸಾಧ್ಯವಿಲ್ಲ, ಯಾರಿಂದಲೂ ಅನಾನು ಹಿಂದುಳಿದ ವರ್ಗದ ಹಿರಿಯ ನಾಯಕ, ಟಿಕೆಟ್ ತಪ್ಪಿದ್ದು ನೋವಿದೆ : ಹೆಚ್.ವಿಶ್ವನಾಥ್ಡಗಿಸಲೂ ಸಾಧ್ಯವಿಲ್ಲ. ವಿಶ್ವನಾಥ್ ಧ್ವನಿ ಯಾವಾಗಲೂ ಮಾರ್ಧನಿಸುತ್ತಿರುತ್ತದೆ. ಮೆತ್ತಗಾಗುವ ಪ್ರಶ್ನೆಯೇ ಇಲ್ಲ. ಕಾದು ನೋಡಬೇಕಿದೆ ಎಂದು ತಿಳಿಸಿದ್ದಾರೆ.