ನಾನು ಅವಮಾನಕ್ಕೆ ಒಳಗಾಗಿದ್ದೇನೆ : ಅಮರಿಂದರ್ ಸಿಂಗ್

1 min read
Amarinder Singh

ನಾನು ಅವಮಾನಕ್ಕೆ ಒಳಗಾಗಿದ್ದೇನೆ : ಅಮರಿಂದರ್ ಸಿಂಗ್

ಪಂಜಾಬ್ : ನಾನು ಅವಮಾನಕ್ಕೆ ಒಳಗಾಗಿದ್ದೇನೆ. ಅವರು ಯಾರನ್ನು ನಂಬಬಲ್ಲರೋ ಅವರನ್ನು ಮುಖ್ಯಮಂತ್ರಿ ಮಾಡಬಹುದು ಎಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಪಕ್ಷದಲ್ಲಿ ಉದ್ಭವವಾಗಿರುವ ಬಂಡಾಯ ಶಮನಗೊಳಿಸಲಾಗದೇ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ.

ಇಂದು ಸಂಜೆ ನಡೆಯಲಿದ್ದ ಶಾಸಕಾಂಗ ಪಕ್ಷದ ಸಭೆಯ ಬಳಿಕ ಅಮರಿಂದರ್ ಸಿಂಗ್ ರಾಜೀನಾಮೆ ನೀಡಲಿದ್ದಾರೆ ಎಂದು ಹೇಳಲಾಗಿತ್ತು.

ಆದ್ರೆ ಅಮರಿಂದರ್ ಸಿಂಗ್ ಅವರು ಶಾಸಕಾಂಗ ಸಭೆಗೂ ಮುನ್ನವೇ ರಾಜ್ಯಪಾಲರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದಾರೆ.

Amarinder Singh saaksha tv

ಬಳಿಕ ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ನಾನು ಅವಮಾನಕ್ಕೆ ಒಳಗಾಗುತ್ತೇನೆ ಎಂದನಿಸಿದೆ.

ಹೀಗಾಗಿ ನಾನು ರಾಜೀನಾಮೆ ನೀಡಿದೆ ಎಂದು ಹೇಳಿದ್ದಾರೆ. ಇದು ಮೂರನೇ ಬಾರಿ ನಡೆಯುತ್ತಿದೆ. ನಾನು ಅವಮಾನಕ್ಕೆ ಒಳಗಾಗಿದ್ದೇನೆ.

ಅವರು ಯಾರನ್ನು ನಂಬಬಲ್ಲರೋ ಅವರನ್ನು ಮುಖ್ಯಮಂತ್ರಿ ಮಾಡಬಹುದು.

ಕಾಂಗ್ರೆಸ್ ಅಧ್ಯಕ್ಷೆ ಏನು ನಿರ್ಧಾರ ಮಾಡುತ್ತಾರೋ ಅದು ಸರಿ. ನಾನು ಕಾಂಗ್ರೆಸ್ ಪಕ್ಷದೊಂದಿಗೆ ಇದ್ದೇನೆ ಎಂದು ಅಮರಿಂದರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd