ಯಾದಗಿರಿ: ಸದ್ಯದಲ್ಲೇ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದ್ದು, ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್‍ಗಾಗಿ ತೀವ್ರ ಪೈಪೋಟಿ ನಡೆದಿದೆ.
ಸುರೇಶ್ ಅಂಗಡಿ ಅಂಗಡಿ ನಿಧನದಿಂದ ತೆರವಾದ ಉಪಚುನಾವಣೆಗೆ ಕಾಂಗ್ರೆಸ್‍ನಿಂದ ಟಿಕೆಟ್‍ಗಾಗಿ ಹಲವು ನಾಯಕರು ತೀವ್ರ ಲಾಬಿ ನಡೆಸುತ್ತಿದ್ದಾರೆ. ಈ ನಡುವೆ, ಬೆಳಗಾವಿ ಲೋಕಸಭಾ ಚುನಾವಣೆಗೆ ನಾನೂ ಆಕಾಂಕ್ಷಿಯಾಗಿದ್ದು, ಪಕ್ಷದ ಹೈಕಮಾಂಡ್ ಗೆ ತಿಳಿಸಿದ್ದೇನೆ ಎಂದು ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ಯಾದಗಿರಿ ಜಿಲ್ಲೆ ಶಹಾಪುರದಲ್ಲಿ ಮಾತಣಾಡಿದ ಸತೀಶ್ ಜಾರಕಿಹೊಳಿ, ಈ ಬಗ್ಗೆ ಮೇಲ್ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಪಕ್ಷದ ಹೈಕಮಾಂಡ್ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.
ರೈತರನ್ನು ಬಿ.ಸಿ ಪಾಟೀಲ್ ಅಪಮಾನ ಮಾಡಿದ್ದಾರೆ
ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ ರೈತರನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಭಯೋತ್ಪಾದಕರು ಎಂದು ಹೇಳುವ ಮೂಲಕ ರೈತ ಸಮೂಹವನ್ನು ಅಪಮಾನ ಮಾಡಿದ್ದಾರೆ. ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರಕ್ಕೆ ತಿರುಗಿದ್ದು, ಇದಕ್ಕೆ ರೈತರು ಕಾರಣರಲ್ಲ, ಈಗಾಗಲೇ ರೈತ ಸಂಘಟನೆಗಳು ಸ್ಪಷ್ಟಪಡಿಸಿವೆ ಎಂದು ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ.
ಕೇಂದ್ರ ಜಾರಿಗೆ ತಂದಿರುವ ಕೃಷಿ ಕಾಯ್ದೆ ರದ್ದುಗೊಳಿಸುವವರೆಗೂ ನಡೆಯುತ್ತಿರುವ ಹೋರಾಟಕ್ಕೆ ಕಾಂಗ್ರೆಸ್ ಬೆಂಬಲ ಇದೆ. ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳದ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕು. ಈ ಬಗ್ಗೆ ಅವಶ್ಯವಿದ್ದಲ್ಲಿ ಹೋರಾಟ ತೀವ್ರಗೊಳಿಸಲಾಗುವುದು. ರಾಜ್ಯದಲ್ಲಿ ಕಾನೂನ ಸುವ್ಯವಸ್ಥೆ ಹದಗೆಟ್ಟಿದೆ. ಖಾತೆಗಳ ಹಂಚಿಕೆಯಿಂದ ಸಚಿವರಲ್ಲಿ ಅಸಮಾಧಾನ ತಾಂಡವಾಡುತ್ತಿದೆ. ಭ್ರಷ್ಟಾಚಾರ ಮೀತಿಮಿರಿದ್ದು, ಸರ್ಕಾರದ ಆಡಳಿತ ವೈಫಲ್ಯದಿಂದಾಗಿ ಜನತೆ ನಿತ್ಯ ತೊಂದರೆ ಎದುರಿಸುತ್ತಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel