ಹಾಸನ: ನನಗೆ ಕೊಟ್ಟಿದ್ದನ್ನು ನಾನು ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಕಿಡಿಕಾರಿದ್ದಾರೆ.
ಜಿಲ್ಲೆಯ ಆಲೂರಿನಲ್ಲಿ ಜೆಡಿಎಸ್ (JDS) ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಇನ್ನೂ ಕೇವಲ ಮೂರು ವರ್ಷ ಕಾಯಿರಿ. ಆ ಮೇಲೆ ಎಲ್ಲದಕ್ಕೂ ಬಡ್ಡಿ ಸಮೇತ ಉತ್ತರ ನೀಡುತ್ತೇನೆ ಎಂದು ಗುಡುಗಿದ್ದಾರೆ.
ಹಾಸನ ಕ್ಷೇತ್ರದ ಗೆಲುವಿನ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದ್ದರಿಂದ ಸಕಲೇಶಪುರದಲ್ಲಿ ಸೋಲಬೇಕಾಯಿತು. ದೇವೇಗೌಡರು, ಕುಮಾರಣ್ಣ, ರೇವಣ್ಣ ನಿಮ್ಮಂತಹ ಪುಣ್ಯಾತ್ಮರಿಂದ ಉಳಿದಿದ್ದಾರೆ. ಪ್ರಜ್ವಲ್ ಅಮಾಯಕ. ಆತನಿಗೆ ಏನೂ ಗೊತ್ತಾಗುವುದಿಲ್ಲ. ಅವನು ಒಳ್ಳೆಯ ಹುಡುಗ. ನಮ್ಮ ದುಡ್ಡು ತಗೊಂಡು ನಮಗೆ ತಿರುಗಿ ಬಿದ್ದಿದ್ದಾರೆ. ಅವರೆಲ್ಲ ಎಲ್ಲಿ ಹೋಗಲ್ಲ. ಎಲ್ಲದಕ್ಕೂ ಉತ್ತರ ನೀಡೇ ನೀಡುತ್ತೇನೆ ಎಂದು ಹೇಳಿದ್ದಾರೆ.