ನಾನು ಸಿಎಂ ರೇಸ್ ನಲ್ಲಿ ಇಲ್ಲ : ಸತೀಶ್ ಜಾರಕಿಹೊಳಿ
ಬೆಳಗಾವಿ : 2023 ರಲ್ಲಿ ನಾನು ಸಿಎಂ ರೇಸ್ ನಲ್ಲಿ ಇಲ್ಲ. ಸಿಎಂ ರೇಸ್ ನಲ್ಲಿ ಇಲ್ಲ ಅಂದಮೇಲೆ ದೆಹಲಿ ಹೋದ್ರು ಚೆನ್ನೈ ಹೋದ್ರು ಅಷ್ಟೆ ಎಂದು ಕೆಪಿಸಿಸಿ ಕಾಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಉಪಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಂಡಿದೆ. ಹೈಕಮಾಂಡ್ ಇನ್ನೂ ಅಭ್ಯರ್ಥಿ ಹೆಸರು ಫೈನಲ್ ಮಾಡಿಲ್ಲ.
ಬೆಂಗಳೂರಿನ ಸಭೆಯಲ್ಲಿ ಬೆಳಗಾವಿ ಲೋಕಸಭಾ ಬಗ್ಗೆ ಚರ್ಚೆ ಮಾಡಿದ್ದೇವೆ. ನಾನೇ ನಿಂತ್ರೆ ಒಳ್ಳೆಯದು ಎಂದು ಎಲ್ಲರೂ ಹೇಳಿದ್ದಾರೆ. ಆದರೇ ಹೈಕಮಾಂಡ್ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಸ್ಪಷ್ಟನೆ ನೀಡಿದರು.
ಇನ್ನ ಪಕ್ಷದ ಸಂಘಟನೆಯ ದೃಷ್ಟಿಯಿಂದ ನನ್ನ ಹೆಸರು ಪ್ರಸ್ತಾಪ ಮಾಡಿದ್ದಾರೆ. ನನಗೆ ರಾಜ್ಯ ರಾಜಕಾರಣದಲ್ಲಿ ಹೆಚ್ಚಿನ ಆಸಕ್ತಿ ಇರೋದು ನಿಜ. ಸೇವಾದಳ, ಮುಂಬೈ ಕರ್ನಾಟಕದಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ.
ನಾಳೆ ಹೈಕಮಾಂಡ್ ಭೇಟಿಯಾಗಿ ಮಾತುಕತೆ ನಂತರ ಫೈನಲ್ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ಫೈನಲ್ ಮಾಡುತ್ತೇನೆ.
2023 ರಲ್ಲಿ ನಾನು ಸಿಎಂ ರೇಸ್ ನಲ್ಲಿ ಇಲ್ಲ. ಸಿಎಂ ರೇಸ್ ನಲ್ಲಿ ಇಲ್ಲ ಅಂದಮೇಲೆ ದೆಹಲಿ ಹೋದ್ರು ಚೆನ್ನೈ ಹೋದ್ರು ಅಷ್ಟೇ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಹೈಕಮಾಂಡ್ ಸೂಚನೆ ನೀಡಿದ್ರೆ ನಾನು ಸ್ಪರ್ಧೆ ಮಾಡುತ್ತೇನೆ. ನಾನು ಪಕ್ಷದ ವೇದಿಕೆಯಲ್ಲಿ ಅನೇಕ ಹೆಸರುಗಳ ಬಗ್ಗೆ ಚರ್ಚೆ ಮಾಡಿದ್ದೇನೆ.
ಪಕ್ಷದ ಆಧಾರದ ಮೇಲೆ ಚುನಾವಣೆ ಮಾಡುತ್ತೇವೆ. ಟಿಕೆಟ್ ಪ್ರಕಟ ಆದರೇ ಕ್ಷೇತ್ರದ ಜನರ ಅಭಿಪ್ರಾಯ ಕೇಳುತ್ತೇನೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.
