ಬೆಂಗಳೂರು : ಗೌಡರು ನನ್ನ ಬೆಂಬಲದಿಂದ ರಾಜ್ಯಸಭೆಗೆ ಆಯ್ಕೆಯಾಗುತ್ತಾರೆ ಎಂದು ಹೇಳುವ ಮುಟ್ಟಾಳ ನಾನಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ನನ್ನ ಬೆಂಬಲದಿಂದ ರಾಜ್ಯಸಭೆಗೆ ಹೋಗುತ್ತಿದ್ದಾರೆ ಎಂದು ಹೇಳಲು ನಾನು ಮುಟ್ಟಾಳನಲ್ಲ. ಅವರಿಗೆ ಅವರದೇ ಆದ ವ್ಯಕ್ತಿತ್ವ, ಹಿರಿತನವಿದೆ. ರಾಜ್ಯಸಭೆಗೆ ದೇವೇಗೌಡರನ್ನು ಬೆಂಬಲಿಸುವುದು ಪಕ್ಷದ ವರಿಷ್ಠರ ತೀರ್ಮಾನ. ಅವರು ರಾಷ್ಟ್ರದ ಆಸ್ತಿ. ಅವರ ಆಯ್ಕೆ ವಿಚಾರದಲ್ಲಿ ಚೌಕಾಸಿ ಮಾಡುತ್ತಾ ಕೂರುವುದಿಲ್ಲ. ನನಗೂ 40 ವರ್ಷದ ರಾಜಕೀಯ ಅನುಭವವಿದೆ. ಪರಿಷತ್ ಚುನಾವಣೆಯಲ್ಲಿ ನಾನು ಯಾರಿಗೂ ಟಿಕೆಟ್ ಕೊಡುವುದಿಲ್ಲ. ಅದೇನಿದ್ದರು ಪಕ್ಷದ ಹೈಕಮಾಂಡ್ ನಿರ್ಧಾರ. ಅವರು ತೆಗೆದುಕೊಂಡ ನಿರ್ಧಾರವನ್ನು ತಿಳಿಸುವುದು ನನ್ನ ಕೆಲಸ. ಎಂದು ಹೇಳಿದ್ದಾರೆ
ದೆಹಲಿಗೆ ಪಾದಯಾತ್ರೆ : ರೈತರ ಮೇಲೆ ಅಶ್ರುವಾಯು, 8 ಮಂದಿ ಗಾಯ
ಹರಿಯಾಣ-ಪಂಜಾಬ್ ಗಡಿಯ ಶಂಭು ಪ್ರದೇಶದಲ್ಲಿ ದೆಹಲಿಯತ್ತ ಪಾದಯಾತ್ರೆಗೆ ತೆರಳಲು ಯತ್ನಿಸಿದ ರೈತರು ಹಾಗೂ ಪೊಲೀಸರು ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಮಧ್ಯಾಹ್ನ 12 ಗಂಟೆಗೆ ಆರಂಭವಾದ ಈ...