ನಾನು ಸಿಎಂ ಸ್ಥಾನದ ಆಕಾಂಕ್ಷಿ ಅಲ್ಲ : ಪ್ರಹ್ಲಾದ್ ಜೋಶಿ
ಧಾರವಾಡ : ನಾನು ಸಿಎಂ ಸ್ಥಾನದ ಆಕಾಂಕ್ಷಿ ಅನ್ನೋದು ವದಂತಿ ಮಾತ್ರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿದೆ. ಅದರಲ್ಲೂ ಸಿಎಂ ಬಿ.ಎಸ್. ಯಡಿಯೂರಪ್ಪನವರೇ ರಾಜೀನಾಮೆಗೆ ಸಿದ್ಧ ಎಂದು ಹೇಳಿಕೆ ನೀಡಿದ ಬಳಿಕ ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ನಡೆಯುತ್ತಿದೆ. ಸಹಿ ಸಂಗ್ರಹ ನಡೆಯುತ್ತಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ.
ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮಲ್ಲಿ ಯಾವುದೇ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿಲ್ಲ, ಸದ್ಯ ನಮ್ಮ ಆದ್ಯತೆ ಕೋವಿಡ್ ನಿಯಂತ್ರಣ ಮಾಡುವದು. ಈಗ ಯಾವುದೇ ಸಿಎಂ ಮತ್ತು ನಾಯಕತ್ವ ಬದಲಾವಣೆ ಇಲ್ಲ, ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ನಾಯಕರಲ್ಲಿ ಚರ್ಚೆಯೂ ನಡೆದಿಲ್ಲ. ನಾನು ಸಿಎಂ ಸ್ಥಾನದ ಆಕಾಂಕ್ಷಿ ಅನ್ನೋದು ವದಂತಿ ಮಾತ್ರ ಎಂದರು.
ಇನ್ನು ಪ್ರಧಾನಿ ನರೇಂದ್ರ ಮೋದಿಯಂತಹ ಶ್ರೇಷ್ಠ ನಾಯಕರ ಅಡಿಯಲ್ಲಿ ಕೆಲಸ ಮಾಡುತ್ತಿರುವೆ, ಬಹಳ ಸಂತೋಷ ಮತ್ತು ಅಭಿಮಾನದಿಂದ ಕೆಲಸ ಮಾಡುತ್ತಿದ್ದೇನೆ. ಇಲ್ಲಿ ಯಡಿಯೂರಪ್ಪವರು ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಇದೆಲ್ಲವೂ ಉಹಾಪೆÇೀಹಗಳು. ಸಿಎಂ ಹೇಳಿಕೆ ವಿಚಾರ ನಿನ್ನೆಯೇ ಮುಗಿದ ಅಧ್ಯಾಯ, ಪ್ರತಿ ವಾರದಂತೆ ಇವತ್ತು ನಾನು ದೆಹಲಿಗೆ ಹೊರಟಿರುವೆ. ನನ್ನ ಕೇಂದ್ರ ಸ್ಥಾನ ಇರುವ ಕಾರಣಕ್ಕೆ ದೆಹಲಿಗೆ ಹೊರಟಿರುವೆ. ಯಡಿಯೂರಪ್ಪ ಯಾವ ಹಿನ್ನೆಲೆಯಲ್ಲಿ ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದಾರೆ ಗೊತ್ತಿಲ್ಲ. ಆದರೂ ಅವರ ಹೇಳಿಕೆಯಲ್ಲಿ ಬೇರೆ ಅರ್ಥ ಏನಿಲ್ಲ ಎಂದು ಹೇಳಿದರು.