ನಾನು ಸಿಎಂ ರೇಸ್ ನಲ್ಲಿಲ್ಲ, ಸಿಎಂ ಆಕಾಂಕ್ಷಿ ನಾನಲ್ಲ : ಮುರುಗೇಶ್ ನಿರಾಣಿ
ಬೆಂಗಳೂರು : ಸಿಎಂ ರೇಸ್ ನಲ್ಲಿ ನಾನಿಲ್ಲ. ನಾನು ಸಿಎಂ ಆಕಾಂಕ್ಷಿ ಅಲ್ಲ ಎಂದು ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.
ನಾಯಕತ್ವ ಬದಲಾವಣೆ ಮತ್ತು ಸಿಎಂ ರೇಸ್ ನಲ್ಲಿ ಮುರುಗೇಶ್ ನಿರಾಣಿ ಹೆಸರು ಕೇಳಿ ಬಂದ ವಿಚಾರಕ್ಕೆ ಸರ್ಕಾರಿ ವಸತಿ ಗೃಹದಲ್ಲಿ ಸಚಿವ ಶಿವರಾಂ ಹೆಬ್ಬಾರ್ ಭೇಟಿ ಬಳಿಕ ಮಾತನಾಡಿದ ಮುರುಗೇಶ್ ನಿರಾಣಿ, ಸಿಎಂ ರೇಸ್ ನಲ್ಲಿ ನಾನಿಲ್ಲ. ನಾನು ಸಿಎಂ ಆಕಾಂಕ್ಷಿ ಅಲ್ಲ.
ಮಾಧ್ಯಮದವರೇ ನನ್ನ ಹೆಸರನ್ನ ಹೇಳುತ್ತಿರುವುದು ಎಂದು ವದಂತಿಗಳಿಗೆ ತೆರೆ ಎಳೆದಿದ್ದಾರೆ.
ನಾನು ಪಕ್ಷದ ಶಿಸ್ತಿನ ಸಿಪಾಯಿ ಹೈಕಮಾಂಡ್ ನನಗೆ ಕೊಟ್ಟ ಜವಾಬ್ದಾರಿಯನ್ನ ಅಚ್ಚುಕಟ್ಟಾಗಿ ನಿರ್ವಹಿಸಲಿದ್ದೇನೆ.
ಅಲ್ಲದೆ ಯಡಿಯೂರಪ್ಪನವರೆ ಮುಂದಿನ ಎರಡು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ.
ಈಗಾಗಲೇ ರಾಷ್ಟ್ರೀಯ ನಾಯಕರು ಯಡಿಯೂರಪ್ಪ ಎರಡು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಅಂತ ಹೇಳಿದ್ದಾರೆ. ನಾನು ಅದನ್ನೇ ಹೇಳಿದ್ದೇನೆ ಎಂದು ಸ್ಪಷ್ಟಡಿಸಿದ್ದಾರೆ.
ಇನ್ನು ನಾನು ಪರ-ವಿರೋಧದ ಹೇಳಿಕೆ ನೀಡಲ್ಲ. ಸಚಿವನಾಗಿ ಕೆಲಸ ಮಾಡ್ತಾ ಇದ್ದೇವೆ. ಅರುಣ್ ಸಿಂಗ್ ಸಹ ಕೆಲವು ಸೂಚನೆ ಕೊಟ್ಟಿದ್ದಾರೆ.
ಮುಂದಿನ ದಿನಗಳಲ್ಲೂ ಹೈಕಮಾಂಡ್ ಕೈಗೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ ಎಂದು ನಿರಾಣಿ ಹೇಳಿದ್ದಾರೆ.