ನವದೆಹಲಿ: ಶಿಗ್ಗಾಂವಿ ಕ್ಷೇತ್ರದ ಆಕಾಂಕ್ಷಿ ನಾನಲ್ಲ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ (ByElection) ದಿನಾಂಕ ಘೋಷಣೆಯಾಗಿದ್ದು ಅಭ್ಯರ್ಥಿಗಳ ಆಯ್ಕೆ ಕಸರತ್ತು ನಡೆಯುತ್ತಿದೆ. ಈ ಮಧ್ಯೆ ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ರಾಜೀನಾಮೆಯಿಂದ ತೆರವಾಗಿರುವ ಶಿಗ್ಗಾಂವಿ ಕ್ಷೇತ್ರಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ (Murugesh Nirani) ಹೆಸರು ಕೇಳಿ ಬಂದಿತ್ತು. ಈಗ ಅದಕ್ಕೆ ಅವರು ಸ್ಪಷ್ಟನೆ ನೀಡಿದ್ದಾರೆ.
ಶಿಗ್ಗಾಂವಿ (Shiggaon) ಕ್ಷೇತ್ರ ಸ್ಪರ್ಧೆಗೆ ನನ್ನ ಹೆಸರು ಕೇಳಿ ಬರುತ್ತಿದೆ. ಮತ್ತೊಂದು ಜಿಲ್ಲೆಗೆ ಹೋಗಿ ನಾನು ಸ್ಪರ್ಧೆ ಮಾಡುವುದು ಸರಿ ಅಲ್ಲ, ನಾನು ಆಕಾಂಕ್ಷಿಯೂ ಅಲ್ಲ. ಭರತ್ ಬೊಮ್ಮಾಯಿ ಸೇರಿದಂತೆ 60 ಜನರು ಸ್ಪರ್ಧೆ ಮಾಡಲು ಮುಂದಾಗಿದ್ದಾರೆ. ಆ ಕ್ಷೇತ್ರದಲ್ಲೂ ಪಂಚಮಸಾಲಿ ಸಮಾಜದವರು ಇದ್ದಾರೆ. ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಅಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.
ಪಕ್ಷಕ್ಕಾಗಿ ದುಡಿದವರಿಗೆ ಟಿಕೆಟ್ ಸಿಗಬೇಕು. ಹೈಕಮಾಂಡ್ ಕಣಕ್ಕೆ ಇಳಿಸುವ ಅಭ್ಯರ್ಥಿಯನ್ನು ಅಂತಿಮವಾಗಿ ಗೆಲ್ಲಿಸಿಕೊಂಡು ಬರುವ ಜವಬ್ದಾರಿ ನಮ್ಮದು ಎಂದಿದ್ದಾರೆ. ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನ.13 ರಂದು ಉಪಚುನಾವಣೆ ನಡೆಯಲಿದೆ. ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿಗೆಗೆ ನ.13 ರಂದು ಉಪಚುನಾವಣೆ ನಡೆಯಲಿದೆ. ನ.23 ರಂದು ಫಲಿತಾಂಶ ಪ್ರಕಟವಾಗಲಿದೆ.